ನವದೆಹಲಿ: ದೆಹಲಿ, ಹರಿಯಾಣ ಸುತ್ತ ಬೆಳ್ಳಂಬೆಳಗ್ಗೆ ಭೂಮಿ ಗಡಗಡ ಕಂಪಿಸಿದೆ. ಕೆಲವು ತಿಂಗಳ ಹಿಂದೆಯಷ್ಟೇ ಇಲ್ಲಿ ಸೌಮ್ಯ ರೂಪದ ಭೂಕಂಪ ಸಂಭವಿಸಿದ್ದು, ಇದೀಗ ಮತ್ತೊಮ್ಮೆ ಕಂಪಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಭೂಮಿ ಕಂಪಿಸುತ್ತಿದ್ದಂತೆ ನಿದ್ದೆಯ ಮಂಪರಿನಲ್ಲಿದ್ದ ಜನ ಕಂಪನವಾಗುತ್ತಿದ್ದಂತೆ ಮನೆಯಿಂದ ಹೊರ ಓಡಿ ಬಂದಿದ್ದಾರೆ.
ಫರಿದಾಬಾದ್ ಭೂಕಂಪನದ ಕೇಂದ್ರಬಿಂದುವಾಗಿದ್ದು, ಬೆಳಿಗ್ಗೆ ಸುಮಾರು 6 ಗಂಟೆಯ ವೇಳೆಗೆ 3.2 ತೀವ್ರತೆಯ ಭೂಕಂಪ ದಾಖಲಾಗಿದ್ದು, ಭೂಕಂಪದ ಆಳವು ಮೇಲ್ಮೈಯಿಂದ 5 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಘಟನೆಯಿಂದ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.