ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ವ್ಯಕ್ತಿಯೋರ್ವ ಕೆಟ್ಟದಾಗಿ ವರ್ತಿಸಿದ ಘಟನೆ ನಿನ್ನೆ(ಜು.22) ಸಂಜೆ ನಡೆದಿದೆ. ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮಹಮ್ಮದ್ ತೌಹೀದ್ ಬಂಧಿತ ಆರೋಪಿ. ಬಸ್ ಪುತ್ತೂರು ಬಸ್ ನಿಲ್ದಾಣ ತಲುಪಿದಾಗ, ಆರೋಪಿ ತುರ್ತು ನಿರ್ಗಮನ ಕಿಟಕಿಯ ಮೂಲಕ ಜಿಗಿದು ಪರಾರಿಯಾಗಲು ಯತ್ನಿಸಿದರೂ, ವಿದ್ಯಾರ್ಥಿನಿಯ ತಂದೆ ಮತ್ತು ಸಾರ್ವಜನಿಕರು ತಕ್ಷಣ ಪ್ರತಿಕ್ರಿಯಿಸಿ ಆರೋಪಿಯನ್ನು ಹಿಡಿದಿಟ್ಟಿದ್ದಾರೆ.
ಈ ಘಟನೆ ಸಂಜೆ 6:30ರ ಸುಮಾರಿಗೆ ಬಂಟ್ವಾಳ ತಾಲೂಕಿನ ಮಾಣಿ ಬಳಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ತಕ್ಷಣ ಸಾರ್ವಜನಿಕರು ಆತನಿಗೆ ಎಚ್ಚರಿಕೆ ನೀಡಿದ್ದು, ಬಳಿಕ ವಿದ್ಯಾರ್ಥಿನಿಯ ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.
ಈ ಘಟನೆಯ ಕುರಿತು ಅ.ರ್ರ.56/2025ಕಲಂ 0 75 BNS 2023 ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19