ಕರಾವಳಿಯಲ್ಲಿ ಮುಂದಿನ 4 ದಿನ ಗಾಳಿ ಸಹಿತ ಮಳೆ ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ)ಜುಲೈ 27ರವರೆಗೆ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಅಧಿಕಾರಿಗಳು ಸಾರ್ವಜನಿಕರು, ಪ್ರವಾಸಿಗರು ಮತ್ತು ಮೀನುಗಾರರಿಗೆ ನದಿ, ನೀರಿರುವ ಪ್ರದೇಶ ಮತ್ತು ಸಮುದ್ರದಿಂದ ದೂರವಿರುವಂತೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರು, ವಿಶೇಷವಾಗಿ ಮಕ್ಕಳು ಮತ್ತು ಕಾರ್ಮಿಕರು ಮಳೆ, ಗಾಳಿ ಅಥವಾ ಸಿಡಿಲು ಇರುವಾಗ ಹೊರಗೆ ಹೋಗಬಾರದು ಮತ್ತು ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ ಅಥವಾ ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಗಳಿಂದ ದೂರವಿರಬೇಕು ಎಂದು ಸಲಹೆ ನೀಡಲಾಗಿದೆ.

ಅಪಾಯಕಾರಿ ಮರಗಳು ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಮತ್ತು ಮುರಿದ ವಿದ್ಯುತ್ ತಂತಿಗಳಿಂದ ದೂರವಿರುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಜನರು ದುರ್ಬಲ ಅಥವಾ ಹಳೆಯ ಕಟ್ಟಡಗಳು ಮತ್ತು ಮರಗಳಿಂದ ದೂರವಿರಬೇಕು. ಕಟ್ಟಡಗಳ ಮೇಲಿರುವ ಅಪಾಯಕಾರಿ ಕೊಂಬೆಗಳು ಇದ್ದಲ್ಲಿ ಅದನ್ನು ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.

ಕೆಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದ್ದು, ಅಂತಹ ಪ್ರದೇಶಗಳ ನಿವಾಸಿಗಳು ಸ್ಥಳೀಯ ತಹಶೀಲ್ದಾರ್ ಅಥವಾ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಸಂಪರ್ಕಿಸಿ ಹತ್ತಿರದ ಪರಿಹಾರ ಕೇಂದ್ರಗಳಲ್ಲಿ ಮುಂಚಿತವಾಗಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.

 

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!