ಮೂಡುಬಿದಿರೆ: ಮೂಡುಬಿದಿರೆ ಪ್ರತಿಷ್ಠಿತ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಲವ್ ಫೈಲ್ಯೂರ್ ನಿಂದಾಗಿ ಡೆತ್ ನೋಟ್ ಬರೆದು ಇಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆ ನೆಹರು ನಗರದ ನಿವಾಸಿಯಾಗಿರುವ ಸೂರ್ಯಮ್ ಮಿಸಾ (17) ಆತ್ಮಹತ್ಯೆಗೊಳಗಾದ ವಿದ್ಯಾರ್ಥಿ.
ಈತ ಕಲ್ಲಬೆಟ್ಟು ಗ್ರಾಮದ ಮನೆಯೊಂದರಲ್ಲಿ ವಾಸವಿದ್ದು ಮನೆಯಲ್ಲಿರುವ ಫ್ಯಾನಿಗೆ ಬೆಡ್ ಶೀಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಲವ್ ಫೈಲ್ಯೂರ್ ನಿಂದಾಗಿ ಆತ್ಮಹತ್ಯೆಗೆ ಮಾಡಿಕೊಂಡಿರುವುದಾಗಿ ಆತ್ಮಹತ್ಯೆಗೂ ಮುನ್ನ ಈತ ಬರೆದಿಟ್ಟಿರುವ ಡೆತ್ ನೋಟ್ ನಿಂದ ಮಾಹಿತಿ ದೊರಕಿದೆ. ಆಂಗ್ಲ ಭಾಷೆಯಲ್ಲಿ ಬರೆದ ಚೀಟಿ ಪೊಲೀಸರ ವಶವಾಗಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಯುವತಿ ಕೈಕೊಟ್ಟಿದ್ದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19