ಧಾರವಾಡ: ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರ ಕಳ್ಳರ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ ಘಟನೆ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಇಂದು ನಡೆದಿದೆ.
ಮುಜಾಮಿಲ್, ವಿಜಯ ಗುಂಡೇಟು ತಿಂದ ಆರೋಪಿಗಳು.
ಧಾರವಾಡದ . ಗಿರಿನಗರದ ಬಡಾವಣೆಯಲ್ಲಿ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದರು. ಬಳಿಕ ಅಲ್ಲಿಂದ ಪರಾರಿಯಾಗುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ, ಪಿಎಸ್ಐ ಮಲ್ಲಿಕಾರ್ಜುನ ಹಾಗೂ ಕಾನ್ಸ್ಟೇಬಲ್ ಮಹ್ಮದ್ ಇಸಾಕ್ ನಧಾಪ್ ಎಂಬಾತರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಕಳ್ಳರು ಯತ್ನಿಸಿದ್ದರು. ಹೀಗಾಗಿ ಆತ್ಮರಕ್ಷಣೆಗಾಗಿ ಕಳ್ಳರ ಕಾಲಿಗೆ ಗುಂಡೇಟು ನೀಡಿದ್ದಾರೆ. ಗಾಯಾಳುಗಳು ಹಾಗೂ ಪೊಲೀಸರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.