ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಎಮ್ಮೆಮಾಡು ಗ್ರಾಮದ ನಿವಾಸಿ ನಜೀರ್ ಎಂಬವರ ಪತ್ನಿ ಸಫ್ರೀನಾ ಶೇಕ್ (32)ಆತ್ಮಹತ್ಯೆ ಶರಣಾದ ಮಹಿಳೆ.
ಸಫ್ರೀನಾ ಬುಧವಾರ ಮಧ್ಯರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ನಾಪೋಕ್ಲುವಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಪತಿ ನಜೀರ್ ಸಫ್ರೀನಾಳನ್ನು ಕರೆತರುವಷ್ಟರಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷಿಸಿ ದೃಢಪಡಿಸಿದ್ದಾರೆ.
ಆದರೆ ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಸಫ್ರೀನಾ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಪತಿ ನಜೀರ್ ಹಾಗೂ ಸಫ್ರೀನಾ ನಡುವೆ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಮೃತ ಸಫ್ರೀನಾ ದೇಹದಲ್ಲಿ ಗಾಯಗಳ ಗುರುತು ಇದ್ದು, ಪತಿ ನಜೀರ್ ಕೊಲೆ ಮಾಡಿ ನೇಣು ಹಾಕಿದ್ದಾನೆ ಆಕೆಯ ಸಹೋದರ ರುವೈಸ್ ಹಾಗೂ ಕುಟುಂಬಸ್ಥರು ನಾಪೋಕ್ಲು ಠಾಣೆಯಲ್ಲಿ ದೂರು ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19