ಕಡಬ: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಚಾಲಕ ಹೊನ್ನಪ್ಪ ದೇವರಗದ್ದೆ (52) ಜುಲೈ 22 ರಂದು ನಾಪತ್ತೆಯಾಗಿದ್ದಾರೆ.
ಹೊನ್ನಪ್ಪ ಅವರು ಜುಲೈ 22 ರ ಬೆಳಗ್ಗೆ ಕರ್ತವ್ಯಕ್ಕೆಂದು ಮನೆಯಿಂದ ಹೊರಟವರು ಬಳಿಕ ನಾಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸರು ಈ ಕುರಿತು ಶೋಧ ಕಾರ್ಯ ಆರಂಭಿಸಲಾಗಿದ್ದು, ಅಗ್ರಹಾರ ದೇವಸ್ಥಾನದ ಬಳಿಯಿಂದಾಗಿ ಕುಮಾರಧಾರ ನದಿಯ ಕಡೆಗೆ ಹೋಗುತ್ತಿರುವುದು ಅಲ್ಲಿನ ಸಿಸಿ ಕ್ಯಾಮೆರಾದ ದೃಶ್ಯದಲ್ಲಿ ಸೆರೆಯಾಗಿದೆ. ಈ ಹಿನ್ನೆಲೆ ಅವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಕುಮಾರಧಾರ ನದಿಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಎಸ್‌ಡಿಆರ್‌ಎಫ್ ತಂಡ ಮತ್ತು ಈಜುಗಾರರು ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ಕೂಡ ಶೋಧ ಕಾರ್ಯಕ್ಕೆ ಸಹಕರಿಸುತ್ತಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19