ರಾಜಸ್ಥಾನ: ಝಲವರ್ ಜಿಲ್ಲೆಯ ಮನೋಹರ್ ಥನ ಬಳಿಯ ಪಿಪ್ಲೋಡಿ ಸರ್ಕಾರಿ ಶಾಲೆಯ ಕಟ್ಟಡ ಕುಸಿದು ನಾಲ್ವರು ಮಕ್ಕಳು ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದು, ಕೆಲವು ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿರುವ ಘಟನೆ ಇಂದು ಬೆಳಗ್ಗೆ 8.30 ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ.
ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಶಾಲೆಯಲ್ಲಿ ಸುಮಾರು 40 ಮಕ್ಕಳಿದ್ದರು. ಜೊತೆಗೆ ಶಿಕ್ಷಕರು ಹಾಗೂ ಸಿಬ್ಬಂದಿ ಸಹ ಇದ್ದರು.
ಮಾಹಿತಿಗಳ ಪ್ರಕಾರ, ಬಿಲ್ಡಿಂಗ್ ಮೊದಲೇ ಶಿಥಿಲಾವಸ್ಥೆಯಲ್ಲಿತ್ತು. ಅದೇ ಬಿಲ್ಡಿಂಗ್ನಲ್ಲಿ 8ನೇ ತರಗತಿ ಮಕ್ಕಳಿಗೆ ಪಾಠ ಹೇಳಿಕೊಡಲಾಗುತ್ತಿತ್ತು. ಈ ಬಗ್ಗೆ ಅನೇಕ ಬಾರಿ ದೂರುಗಳನ್ನು ದಾಖಲಿಸಲಾಗಿತ್ತು. ಆದರೆ ಯಾವುದೇ ಪ್ರಯೋಜನ ಆಗಿರಲಿಲ್ಲ.
ದುರಂತ ಸ್ಥಳಕ್ಕೆ ಎಸ್ಪಿ ಅಮಿತ್ ಕುಮಾರ್ ಭೇಟಿ ನೀಡಿದ್ದಾರೆ. ಅವರು ನೀಡಿದ ಮಾಹಿತಿ ಪ್ರಕಾರ, 4 ಮಕ್ಕಳು ಜೀವ ಕಳೆದುಕೊಂಡಿದ್ದು, 17 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19