ಚಿಕ್ಕಮಗಳೂರು: ನಿನ್ನೆ ಸಂಜೆ ಭದ್ರಾ ನದಿಗೆ ಪಿಕಪ್ ಸಮೇತ ಬಿದ್ದು ನಾಪತ್ತೆಯಾಗಿರುವ ಮಗನ ಸಾವಿನಿಂದ ಮನನೊಂದ ತಾಯಿ, ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಳಸದ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ನಿಯಂತ್ರಣ ಕಳೆದುಕೊಂಡ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ನಾಪತ್ತೆಯಾಗಿದ್ದ. ಆತನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಭಾರೀ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದಿತ್ತು. ಶಮಂತ್ ಪಿಕಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಈ ಅವಘಡ ಸಂಭವಿಸಿತ್ತು.
ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ಮಳೆಯಿಂದಾಗಿ ತೊಂದರೆಯಾಗಿತ್ತು. ಭದ್ರಾ ನದಿ ಬಳಿ ಬಂದಿದ್ದ ಶಮಂತ್ ಮಗನನ್ನು ಹುಡುಕಿಕೊಡಿ ಕಣ್ಣೀರಿಟ್ಟಿದ್ದರು. ಆದರೆ ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದು ಗ್ರಾಮದಲ್ಲಿ ಶೋಕ ಆವರಿಸುವಂತೆ ಮಾಡಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19