ದಾಸರಹಳ್ಳಿ: ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆಗೆ ಸರಿ ಎನ್ನಿಸುವಂತೆ ಮಾದನಾಯಕನಹಳ್ಳಿ ಸಮೀಪದ ಕೆ.ಜಿ.ನಾಯಕನಹಳ್ಳಿ ನಿವಾಸಿಗಳಾದ ಜಯರಾಮ್-ಮಹಾದೇವಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆ ತನ್ನ 5 ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
9 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಈ ದಂಪತಿಗೆ 5 ವರ್ಷ ಸಿರಿ ಎಂಬ ಮಗಳು ಇದ್ದಳು. ಜಯರಾಮ್ ಈ ಮೊದಲು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅದನ್ನು ತೊರೆದು ಬೇರೆ ಕೆಲಸ ಮಾಡತೊಡಗಿದ. ಆತ 2 ತಿಂಗಳಿಂದ ಯಾವುದೇ ಕೆಲಸಕ್ಕೆ ಹೋಗದೆ ಮದ್ಯ ಸೇವಿಸಿ ಬಂದು ಪತ್ನಿ ಮೇಲೆ ಹಲ್ಲೆ ನಡೆಸುತ್ತಿದ್ದ. ಇನ್ನು ಮಹಾದೇವಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದು, ಆಕೆ ಕೂಡ ಕೆಲಸ ಬಿಟ್ಟಿದ್ದಳು.
ಹೀಗೇ ಬುಧವಾರದಂದು ಕೂಡ ಇವರಿಬ್ಬರ ನಡುವೆ ಜಗಳ ನಡೆದು ಬಳಿಕ ಮಹಾದೇವಿ ಪುತ್ರಿಯನ್ನು ಕೋಣೆಗೆ ಕರೆದೊಯ್ದಿದ್ದಾಳೆ. ಈ ವೇಳೆಯೇ ಕೋಪದಿಂದ ಪುತ್ರಿಯ ಕತ್ತು ಹಿಸುಕಿ ಹತ್ಯೆಗೈದು, ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಘಟನೆಯನ್ನು ಗಮನಿಸಿ ಸ್ಥಳೀಯರೊಬ್ಬರು ಮಹಾದೇವಿಯನ್ನು ಕುಣಿಕೆಯಿಂದ ಇಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಈಕೆ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆ ಸಂಬಂಧ ಮಹಾದೇವಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಈಕೆಯ ಪತಿ ಜಯರಾಮ್‌ನನ್ನು ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19