ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆ ಲಂಚಕ್ಕೆ ಬೇಡಿಕೆ, ಲೋಕಾಯುಕ್ತ ಬಲೆಗೆ ಬಿದ್ದ ಉಪ ನಿರ್ದೇಶಕಿ

ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರು ಉಡುಪಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಈ ಇಬ್ಬರು ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿ ಚುನಾವಣೆ ಮಾಡಿ ಕೊಡಲು ತಲಾ ರೂ. 5000ದಂತೆ ಒಟ್ಟು 10,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದೆ.

ಈ ಕುರಿತು ಲಂಚ ನೀಡಲು ಒಪ್ಪದ ಶಾಂತಿನಿಕೇತನ ಸೌಹರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಕ ನರೇಂದ್ರರವರು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.

ಅದರಂತೆ ರೇಣುಕಾ ಉಡುಪಿಯಲ್ಲಿರುವ ತನ್ನ ಕಚೇರಿಯಲ್ಲಿ ಲಂಚದ ಹಣ ಪಡೆಯುತ್ತಿರುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!