ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್‌ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳುವ ನಿರೀಕ್ಷೆ ಇದೆ. ಎಸ್‌ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡವು ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿರುವ ಮಾಹಿತಿ ಲಭಿಸಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾಟ್ರಸ್‌ನಲ್ಲಿ ಎಸ್‌ಐಟಿ ಕಚೇರಿ ಆರಂಭಿಸಲಿದೆ.
ಈ ಕಚೇರಿಯಿಂದಲೇ ಎಸ್‌ಐಟಿ ತನಿಖೆ ಆರಂಭಿಸಲಿದ್ದು, ಈಗಾಗಲೇ ಎಲ್ಲಾ ವ್ಯವಸ್ಥೆಗಳನ್ನ ಮಾಡಿಕೊಂಡಿದೆ. ಶವಗಳನ್ನು ಹೂತಿರುವ ಪ್ರಕರಣದೊಂದಿಗೆ ಇನ್ನಷ್ಟು ದೂರುಗಳು ಎಸ್‌ಐಟಿ ಕಚೇರಿಯಲ್ಲಿ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಒಟ್ಟಾರೆ ಧರ್ಮಸ್ಥಳ ಗ್ರಾಮದ ಕಾಡುಗಳಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಜಡ್ಜ್ ಮುಂದೆ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19