ಅರಂತೋಡು: ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ.
ಮೃತರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಿಲಾಗಿದೆ. ಮತ್ತೋರ್ವ ಮೃತ ಯುವಕನ ಹೆಸರು ಇನ್ನಷ್ಟೇ ತಿಳಿಯಬೇಕಾಗಿದೆ.
ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಭೀಕರ ಅಪಘಾತದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಕೂಡ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಸ್ಥಳದಲ್ಲಿ ಸುಳ್ಯದ ಆಂಬುಲೆನ್ಸ್ ಚಾಲಕರು ಸೇರಿದ್ದು ಮೃತರ ಮನೆಯವರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೋಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19