ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದ ಸಮಗ್ರ ತನಿಖೆಗೆ ರಚಿಸಿರುವ ಎಸ್ಐಟಿ ತಂಡದಿಂದ ಐಪಿಎಸ್ ಅಧಿಕಾರಿ, ಬೆಂಗಳೂರು ಸಿಎಆರ್ ಡಿಸಿಪಿ ಡಾ.ಎಸ್.ಕೆ.ಸೌಮ್ಯಲತಾ ತನಿಖಾ ತಂಡದಿಂದ ಹೊರಗುಳಿಯಲು ನಿರ್ಧರಿಸಿ, ಈ ಬಗ್ಗೆ ತಂಡದ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.
ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರಿಗೆ ಪತ್ರ ಬರೆದಿದ್ದು, ”ವೈಯಕ್ತಿಕ ಕಾರಣಕ್ಕೆ ವಿಶೇಷ ತನಿಖಾ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದೇನೆ. ಆದ್ದರಿಂದ ನನ್ನನ್ನು ತಂಡದಿಂದ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ತನಿಖೆಯ ರೂಪುರೇಷೆಗಳ ಕುರಿತು ಸಿಐಡಿ ಕಚೇರಿಯಲ್ಲಿ ನಡೆದ ಎಸ್ಐಟಿ ಸಭೆಗೂ ಸೌಮ್ಯಲತಾ ಗೈರಾಗಿದ್ದರು. ಮನವಿಯನ್ನು ಪುರಸ್ಕರಿಸಿರುವ ಪ್ರಣವ್ ಮೊಹಾಂತಿ, ಎಸ್‌ಐಟಿ ತಂಡದಿಂದ ಸೌಮ್ಯಲತಾ ಅವರ ಹೆಸರನ್ನು ಕೈಬಿಡುವಂತೆ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಗೊತ್ತಾಗಿದೆ.
ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಬಗ್ಗೆ ಅಧಿಕೃತವಾಗಿ ಎಸ್ಐಟಿ ಮುಖ್ಯಸ್ಥರಾಗಲಿ ಅಥವಾ ಅಧಿಕಾರಿ ಸೌಮ್ಯಲತಾ ಅವರಾಗಲೀ ನನಗೆ ತಿಳಿಸಿಲ್ಲ. ಆದರೆ ಅನಧಿಕೃತವಾಗಿ ಸೌಮ್ಯಲತಾ ತಂಡದಿಂದ ಹೊರಗುಳಿಯುವ ವಿಚಾರಕ್ಕೆ ಪತ್ರ ಬರೆದಿರುವುದು ಗೊತ್ತಾಗಿದೆ. ವೈಯಕ್ತಿಕ ಕಾರಣಕ್ಕೆ ಎಸ್ ಐಟಿಯಿಂದ ಹೊರಗುಳಿಯುವ ಬಗ್ಗೆ ಅವರು ಮಾಹಿತಿ ಕೊಟ್ಟಿದ್ದಾರೆ. ಒಂದು ವೇಳೆ ಅದು ನಿಜವಾಗಿದ್ದಲ್ಲಿ ಅವರನ್ನು ಬದಲಾಯಿಸಲಾಗುವುದು ಎಂದು ಹೇಳಿದರು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19