ಬಂಟ್ವಾಳ: ರಾ.ಹೆ.75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ಅಭಿವೃದ್ಧಿಗೊಂಡ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಪರಿಣಾಮವಾಗಿ ಶುಕ್ರವಾರ(ಜು.25)ದಂದು ಕಾರು ಹಾಗೂ ಆ್ಯಂಬುಲೆನ್ಸ್ ನಿಯಂತ್ರಣ ತಪ್ಪಿ ಪ್ರತ್ಯೇಕ ಅಪಘಾತ ಉಂಟಾಗಿದೆ.
ಕುದ್ರಬೆಟ್ಟುನಲ್ಲಿ ಮಾಣಿ ಭಾಗದಿಂದ ಕಲ್ಲಡ್ಕದತ್ತ ಆಗಮಿಸುವ ಭಾಗದ ಹೆದ್ದಾರಿಯಲ್ಲಿ ನೀರು ನಿಂತಿದ್ದು, ವೇಗವಾಗಿ ಬರುವ ವಾಹನಗಳು ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಳ್ಳುತ್ತದೆ.
ಈಗಾಗಲೇ ಸಾಕಷ್ಟು ವಾಹನ ಅಪಘಾತಕ್ಕೀಡಾಗಿದ್ದು, ಮತ್ತೆ ಶುಕ್ರವಾರ ಮುಂಜಾನೆ ಬೆಂಗಳೂರು ಭಾಗದಿಂದ ಮಂಗಳೂರಿನತ್ತ ಆಗಮಿಸುತ್ತಿದ್ದ ಕಾರು ನೀರಿನಲ್ಲಿ ಚಲಿಸಿದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಶುಕ್ರವಾರ ಸಂಜೆ ಕಲ್ಲಡ್ಕದ ಆಸ್ಪತ್ರೆಯೊಂದರಿಂದ ರೋಗಿಯನ್ನು ಮಂಗಳೂರಿಗೆ ಸಾಗಿಸಲು ಸೂರಿಕುಮೇರಿನಿಂದ ಆಗಮಿಸುತ್ತಿದ್ದ ಆ್ಯಂಬುಲೆನ್ಸ್ ನೀರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಎರಡೂ ಅಪಘಾತಗಳಿಂದ ಜೀವಹಾನಿ ಉಂಟಾಗದೇ ಇದ್ದರೂ, ವಾಹನಗಳು ಜಖಂಗೊಂಡಿವೆ.
ಈ ಕುರಿತು ರಾ.ಹೆ. ಪ್ರಾಧಿಕಾರ ಇದರ ಬಗ್ಗೆ ಗಮನ ಹರಿಸಿ ನೀರು ನಿಲ್ಲದಂತೆ ಕ್ರಮವಹಿಸಲು ಗುತ್ತಿಗೆ ಸಂಸ್ಥೆಗೆ ನಿರ್ದೇಶನ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19