ಯುವತಿ ಸಾವು

ಕಡಬ : ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದಲ್ಲಿ ಸಂಭವಿಸಿದೆ.

ಇಡಾಳ ನಿವಾಸಿ, ಕರಿಯಪ್ಪ ಯಾನೆ ಕೇಶವ ಗೌಡ ಎಂಬವರ ಪುತ್ರಿ 23 ವರ್ಷದ ಶ್ವೇತಾ ಮೃತಪಟ್ಟ ಯುವತಿ. ಶ್ವೇತಾ ಪದವೀಧರೆಯಾಗಿದ್ದು, ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ.

ಕಿಡ್ನಿ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಆಕೆ ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣಮುಖಳಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣ ಆಕೆಯನ್ನು ಆಲಂಕಾರಿನ ಖಾಸಗಿ ಕ್ಲಿನಿಕ್ ಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಶ್ವೇತಾ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!