ಮಾಸ್ಕೋ: ರಷ್ಯಾದ ಕರಾವಳಿ ಪ್ರದೇಶವಾಗಿರುವ ಪೂರ್ವ ಕಮ್ಚಟ್ಕಾ ದ್ವೀಪದ ಪೆನಿನ್ಸುಲಾದಲ್ಲಿರುವ ಪೆಟ್ರೋಪಾವ್ಲೋವ್ಸಕ್ ನಿಂದ ಸುಮಾರು 136 ಕಿಲೋಮೀಟರ್ ದೂರದಲ್ಲಿ 8.7 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ. ಇದು 74 ವರ್ಷಗಳ ಬಳಿಕ ಸಂಭವಿಸಿದ ಅತೀ ಪ್ರಬಲ ಭೂಕಂಪವಾಗಿದೆ. ಅಮೆರಿಕದ ಅಲಾಸ್ಕಾದ ಭಾಗಗಳು ಹಾಗೂ ಜಪಾನ್‌ಗೆ ಸುನಾಮಿಯ ಎಚ್ಚರಿಕೆ ನೀಡಲಾಗಿದೆ.
19 ಕಿಮೀ ಆಳದಲ್ಲಿ ಈ ಸುನಾಮಿಯ ಕೇಂದ್ರ ಬಿಂದು ಪತ್ತೆಯಾಗಿದ್ದು, 4 ಮೀಟರ್ (13 ಅಡಿ) ವರೆಗಿನ ಸುನಾಮಿ ಅಪ್ಪಳಿಸಿದೆ. ಕಮ್ಚಟ್ಕಾದ ಕೆಲವು ಭಾಗಗಳಲ್ಲಿ 3-4 ಮೀಟರ್ (10-13 ಅಡಿ) ಎತ್ತರದ ಸುನಾಮಿ ದಾಖಲಾಗಿದೆ ಎಂದು ಪ್ರಾದೇಶಿಕ ಸಚಿವ ಸೆರ್ಗೆಯ್ ಲೆಬೆಡೆವ್ ತಿಳಿಸಿದ್ದಾರೆ.
ಈ ಬೆನ್ನಲ್ಲೇ ಅಮೆರಿಕದ ಅಧಿಕಾರಿ ಹಾಗೂ ಜಪಾನ್‌ನ ಹವಾಮಾನ ಇಲಾಖೆಯು ಸುನಾಮಿ ಎಚ್ಚರಿಕೆ ನೀಡಿದೆ.
ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಭೂಕಂಪದ ಕೇಂದ್ರಬಿಂದು 19.3 ಕಿಮೀ (12 ಮೈಲುಗಳು) ಆಳದಲ್ಲಿ ಪತ್ತೆಯಾಗಿದೆ. ಸದ್ಯಕ್ಕೆ ಯಾವುದೇ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ರಷ್ಯಾದ ಬಳಿ ಸಂಭವಿಸಿದ ಪ್ರಬಲ ಭೂಕಂಪದ ಕಾರಣ, ಜಪಾನ್ ದೇಶದಲ್ಲೂ ಸುನಾಮಿ ಎಚ್ಚರಿಕೆ ನೀಡಿದೆ. ಒಂದು ಮೀಟರ್ ಎತ್ತರದ ಅಲೆಗಳು ಜಪಾನ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹೇಳಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19