ಮಂಗಳೂರು: ಕರ್ನಾ ಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿ ಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಂಸಿಸಿ ಬ್ಯಾಂಕ್ ಈ ಸಾಲಿನ ವಿತ್ತೀಯ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾಪನಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಬ್ಯಾಂಕಿನ 20ನೇ ಶಾಖೆಯನ್ನು ಆಗಸ್ಟ್ ೩ರಂದು ಬೈಂದೂರಿನಲ್ಲಿ ಹಾಗೂ ಅಕ್ಟೋಬರ್ ೫ರಂದು ಸಂತೆಕಟ್ಟೆಯಲ್ಲಿ ೨೧ನೇ ಶಾಖೆಯನ್ನು ತೆರೆಯಲಿದೆ ಎಂದು ಎಮ್.ಸಿ.ಸಿ. ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೊ ತಿಳಿಸಿದರು.
ಅವರು ಬುಧವಾರ ಮಧ್ಯಾ ಹ್ನ ಮಂಗಳೂರಿನ ಹಂಪ ನಕಟ್ಟೆಯಲ್ಲಿರುವ ಎಂ.ಸಿ.ಸಿ. ಬ್ಯಾಂಕ್‌ನ ಪ್ರಧಾನ ಕಚೆರಿಯ ಆಡಳಿತ ಮಂಡಳಿ ಸಭಾಂಗಣ ದಲ್ಲಿ ಕರೆದ ಪತ್ರಿಕಾಗೋಷ್ಠಿ ಯನ್ನುದ್ದೇಶಿಸಿ ಅವರು ಮಾತ ನಾಡಿದರು.
ಬ್ಯಾಂಕಿನ ಪ್ರಗತಿಯ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿರುವ ಸಮರ್ಥ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದ ಶ್ರಮ ಹಾಗೂ ಬ್ಯಾಂಕಿನ ಆರ್ಥಿಕ ಪ್ರಗತಿಯತ್ತ ಗಮನಹರಿಸಿ ಕಾರ್ಯ ಯೋಜನೆಯನ್ನು ಹಮ್ಮಿಕೊಂ ಡಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕಿನ ಎಲ್ಲಾ ಮಾನದಂಡಗಳನ್ನು ಪೂರೈಸಿ ಎಮ್.ಸಿ.ಸಿ. ಬ್ಯಾಂಕ್ ೨೨ ವರ್ಷಗಳ ನಂತರ ಬ್ರಹ್ಮಾವರ, ಬೆಳ್ತಂಗಡಿ ಮತ್ತು ಬೆಳ್ಮಣ್‌ನಲ್ಲಿ ಮೂರು ಶಾಖೆಗಳನ್ನು ತೆರೆದಿದ್ದು, ಶಾಖೆಗಳ ಒಟ್ಟು ಸಂಖ್ಯೆಯು ೧೬ರಿಂದ ೧೯ಕ್ಕೆ ತಲುಪಿದೆ ಎಂದರು. ಕೇವಲ ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಬ್ಯಾಂಕಿನ ಕಾರ್ಯವ್ಯಾಪ್ತಿಯು ಇಡೀ ಕರ್ನಾಟಕ ರಾಜ್ಯದ್ಯಂತ ವಿಸ್ತರಿಸಿದೆ. ಎಮ್.ಸಿ.ಸಿ. ಬ್ಯಾಂಕ್ ಸಂಪೂರ್ಣವಾಗಿ ಕೋರ್ ಬ್ಯಾಂಕಿಂಗ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇತರ ಖಾಸಗಿ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಎಲ್ಲಾ ಸೇವೆ ಮತ್ತು ಸೌಲಭ್ಯಗಳು ಎಮ್.ಸಿ.ಸಿ. ಬ್ಯಾಂಕಿನಲ್ಲಿ ದೊರೆಯುತ್ತಿವೆ. ಬ್ಯಾಂಕ್ ಕರ್ನಾಟಕ ರಾಜ್ಯದಾ ದ್ಯಂತ ತನ್ನ ಶಾಖೆಗಳನ್ನು ವಿಸ್ತರಿಸುವ ಕಾರ್ಯಯೋಜನೆ ಯನ್ನು ಹಮ್ಮಿಕೊಂಡಿದೆ. ಕರ್ನಾಟಕ ರಾಜ್ಯದ್ಯಾಂತ ಕಾರ್ಯ ವ್ಯಾಪ್ತಿ ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್, ಮಂಗಳೂರಿನಲ್ಲಿ ನವೀ ಕೃತಗೊಂಡ ಸುಸಜ್ಜಿತ ಆಡಳಿತ ಕಚೆರಿಯೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ೧೯ ಶಾಖೆಗಳನ್ನು ಹೊಂದಿದೆ ಎಂದು ಅನಿಲ್ ಲೋಬೊ ತಿಳಿಸಿದರು.
ಬೈಂದೂರು ಶಾಖೆಯ ಉದ್ಘಾಟಣಾ ಕಾರ್ಯಕ್ರಮದಲ್ಲಿ ಬೈಂದೂರಿನ ಹೋಲಿ ಕ್ರಾಸ್ ಚರ್ಚ್‌ನ ಧರ್ಮಗುರು ವಂದ ನೀಯ ವಿನ್ಸೆಂಟ್ ಕುವೆಲ್ಲೊ ಶಾಖೆಯನ್ನು ಆಶೀರ್ವದಿಸಲಿ ದ್ದಾರೆ. ಬೈಂದೂರಿನ ಶಾಸಕ ಗುರುರಾಜ್ ಗಂಟಿಹೊಳೆ ಮುಖ್ಯ ಅತಿಥಿಯಾಗಿರಲಿದ್ದಾರೆ. ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರಿನ ಆಡಳಿತ ಧರ್ಮ ದರ್ಶಿ ಬಾಬು ಶೆಟ್ಟಿ, ಬೈಂದೂರು ಸೇಂಟ್ ಫಾಮಸ್ ರೆಸಿಡೆನ್ಸಿ ಯಲ್ ಸ್ಕೂಲ್, ಇದರ ಪ್ರಾಂಶು ಪಾಲ ವಂದನೀಯ ಫಿಲಿಷ್ ನೆಲಿವಿಲ್ಲ. ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬೈಂದೂರು ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸದಾಶಿವ ಡಿ. ಪಡುವರಿ, ಶಿರೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಕಾಪ್ಸಿನೂರ್ ಮೊಹಮ್ಮದ್, ನಾಡದೋಣಿ ರಾಜ್ಯ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ಬೈಂದೂರಿನ ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ. ಇವರು ಗೌರವ ಅತಿಥಿಗಳಾಗಲಿದ್ದಾರೆ ಸಹಕಾರ ರತ್ನ ಅನಿಲ್ ಲೋಬೋ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜೆರಾಲ್ಡ್ ಜೂಡ್ ಡಿಸಿಲ್ವಾ ಉಪಾಧ್ಯಕ್ಷರು; ಆಂಡ್ರ್ಯೂ ಡಿಸೋಜಾ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೋಡ್ರಿಗಸ್, ಡೇವಿಡ್ ಡಿಸೋಜಾ, ಎಲ್ರಾಯ್ ಕಿರಣ್, ಹೆರಾಲ್ಡ್ ಮೊಂಟೆರೊ. ರೋಶನ್ ಡಿಸೋಜಾ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ದಾನಹಾ, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೋ ಜಾ, ಅಶ್ವಿನ್ ಮೊಂತೆರೊ, ಫೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇ ಜಸ್ ನಿರ್ದೇಶಕರು ಮತ್ತು ಸುನಿಲ್ ಮಿನೇಜಸ್- ಮಹಾಪ್ರ ಬಂಧಕರು ಉಪಸ್ಥಿತರಿದ್ದರು.
ಗ್ರಾಹಕರಿಗೆ ಹಲವು ಸೌಲಭ್ಯಗಳು:
ಪ್ರಸ್ತುತ ಬ್ಯಾಂಕಿನಲ್ಲಿ ಗ್ರಾಹಕರಿಗೆ ಕಡಿಮೆ ಬಾಡಿಗೆ ದರದಲ್ಲಿ ಲಾಕರ್ ಸೌಲಭ್ಯ, ಸ್ಪರ್ಧಾತ್ಮಕ ಬಡ್ಡಿ ದರದಲ್ಲಿ ದೇಶ- ವಿದೇಶ ವಿಧ್ಯಾ ಭವಿಷ್ಯ ಶಿಕ್ಷಣ ಸಾಲ, ಎಮ್.ಎಸ್.ಎಮ್.ಇ ವ್ಯವಹಾರ ಸಾಲ, ವಾಹನ ಸಾಲ, ವಸತಿ ಸಾಲ, ಮನೆ ಖರೀದಿ, ದುರಸ್ತಿ, ಮದುವೆ, ಗ್ರಹ ಉಪಯೋಗಿ ವಸ್ತು ಖರೀದಿ ಸಾಲವನ್ನು ತ್ವರಿತವಾಗಿ ನೀಡುತ್ತಿದೆ. ಸೇವಾ ಶುಲ್ಕ ವಿಲ್ಲದೆ ಚಿನ್ನಾಭರಣ ಸಾಲವನ್ನು ನೀಡುತ್ತಿದೆ. ಎಟಿಎಮ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದೆ. ಬ್ಯಾಂಕಿನಲ್ಲಿರುವ ಠೇವಣಿಗಳಿಗೆ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳಂತೆಯೇ ಭಾರತೀಯ ರಿಸರ್ವ್ ಬ್ಯಾಂಕಿನ ಡಿಪಾಜಿಟ್ ಇನ್ಸೂರೆನ್ಸ್ ಆಂಡ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊ ರೇಶನ್‌ನಿಂದ (DICGC) ವಿಮಾ ಸೌಲಭ್ಯವಿದೆ.
ಎಟಿಎಂ ಉದ್ಘಾಟನೆ
ಆಗಸ್ಟ್ 9ರಂದು ಬೆಳ್ಳಗ್‌ನಲ್ಲಿ 9ನೇ ಎಟಿಎಮ್, ಆ. 10ರಂದು ಸುರತ್ಕಲ್‌ನಲ್ಲಿ 10ನೇ ಎಟಿಎಮ್, ಆ.17 ರಂದು ಕುಲಶೇಖರ ಶಾಖೆಯನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು ಉದ್ಘಾಟನೆ ಹಾಗೂ 11ನೇ ಎಟಿಎಮ್ ಉದ್ಘಾಟನೆ ನಡೆಯಲಿದೆ. ಸೆಪ್ಟೆಂಬರ್ 14ರಂದು ಕಿನ್ನಿಗೋಳಿಯಲ್ಲಿ 12ನೇ ಎಟಿಎಮ್, ಸೆ.27ರಂದು ಉಡುಪಿ ಶಾಖೆಯಲ್ಲಿ 13ನೇ ಎಟಿಎಮ್. ಮತ್ತು ಅಕ್ಟೋಬರ್ 5ರಂದು 14ನೇ ಎಟಿಎಮ್ ಸಂತೆಕಟ್ಟೆಯಲ್ಲಿ ಉದ್ಘಾಟನೆಗೊಳ್ಳಲಿದೆ.
ಶೇ.150 ಪ್ರಗತಿ ದಾಖಲು
ಸಹಕಾರ ರತ್ನ ಆನಿಲ್ ಲೋಬೊರವರ ಆಡಳಿತ ಮಂಡಳಿಯು 2018ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, 2018ರಿಂದ 2025ರ ವಿತ್ತೀಯ ವರ್ಷದಲ್ಲಿ ಅಭೂತಪೂರ್ವ ಪ್ರಗತಿಯನ್ನು ದಾಖಲಿಸಿದೆ. ರೂ. 304 ಕೋಟಿ ಇದ್ದ ಬ್ಯಾಂಕಿನ ಠೇವಣಿಯು 2025ರಲ್ಲಿ ರೂ. 728 ಕೋಟಿಗೆ ತಲುಪಿದ್ದು, ಶೇಕಡಾ 139ರಷ್ಟು ಪ್ರಗತಿಯನ್ನು ದಾಖಲಿಸಿದೆ. ರೂ. 191 ಕೋಟಿ ಇದ್ದ ಸಾಲ ಮತ್ತು ಮುಂಗಡಗಳು ರೂ. 572 ಕೋಟಿಗೆ ತಲುಪಿದ್ದು, ಶೇಕಡಾ 199ರಷ್ಟು ಪ್ರಗತಿಯನ್ನು ದಾಖಲಿಸಿದೆ. ರೂ. 13 ಕೋಟಿ ಇದ್ದ ಪಾಲು ಬಂಡವಾಳ ರೂ. 33 ಕೋಟೆಗೆ ತಲುಪಿದ್ದು, ಶೇಕಡಾ 154ರಷ್ಟು ಪ್ರಗತಿಯನ್ನು ದಾಖಲಿಸಿದೆ. ಬ್ಯಾಂಕಿನ ರಿಸರ್ವ್ ರೂ. 29 ಕೋಟಿಯಿಂದ ರೂ. 79 ಕೋಟಿಗೆ ತಲುಪಿದ್ದು, ಶೇಕಡಾ 172ರಷ್ಟು ಪ್ರಗತಿಯನ್ನು ದಾಖಲಿಸಿದೆ, ರೂ. 496 ಕೋಟಿ ಇದ್ದ ವ್ಯವಹಾರ ರೂ. 1300 ಕೋಟಿಗೆ ತಲುಪಿದ್ದು, ಶೇಕಡಾ 162ರಷ್ಟು ಪ್ರಗತಿಯನ್ನು ದಾಖಲಿಸಿದೆ. ಶೇಕಡಾ 11.70 ಇದ್ದ ಬ್ಯಾಂಕಿನ CRAR (Capital to Risk Assets Ratio) ಪ್ರಮಾಣವು ಶೇಕಡಾ 19.82 ತಲುಪಿದ್ದು ಶೇಕಡಾ 62 ರಷ್ಟು ಪ್ರಗತಿಯನ್ನು ದಾಖಲಿಸಿದೆ. ಶೇಕಡಾ 0.56 ಇದ್ದ ಬ್ಯಾಂಕಿನ ರಿಟರ್ನ್ ಆನ್ ಅಸೆಟ್ಸ್ ಮೌಲ್ಯವು ಶೇಕಡಾ 1.40 ಗೆ ತಲುಪಿ ಶೇಕಡಾ 150 ಪ್ರಗತಿಯನ್ನು ದಾಖಲಿಸಿದೆ.