ಕೊನಸೀಮಾ: ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಪ್ರಾಂಶುಪಾಲನೊಬ್ಬ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಸಂತ್ರಸ್ತೆ 3 ತಿಂಗಳ ಗರ್ಭಿಣಿಯಾಗಿದ್ದಾಳೆ.
ಪ್ರಾಂಶುಪಾಲ ಜಯರಾಜು ಪ್ರಕರಣದ ಆರೋಪಿ.
ಶಾಲೆಯ ಪ್ರಾಂಶುಪಾಲನಾಗಿರುವ ಜಯರಾಜು ಸುಮಾರು ನಾಲ್ಕು ತಿಂಗಳ ಹಿಂದೆ 9 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ವರದಿಗಳ ಪ್ರಕಾರ, ದೌರ್ಜನ್ಯದ ಬಗ್ಗೆ ಹೊರಗೆ ಹೇಳಬಾರದೆಂದು ಆತ ಬಾಲಕಿಗೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಬಾಲಕಿಯ ಪೋಷಕರು ಮೂರು ತಿಂಗಳಿನಿಂದ ಋತುಚಕ್ರ ತಪ್ಪಿರುವುದನ್ನು ಗಮನಿಸಿ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ ಎನ್ನುವುದನ್ನು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು ಕುಟುಂಬವು ಪೊಲೀಸರನ್ನು ಸಂಪರ್ಕಿಸಿ ದೂರನ್ನು ದಾಖಲಿಸಿದೆ.
ರಾಯವರಂ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿಯಲ್ಲಿ ದೂರು ದಾಖಲಾಗಿದ್ದು, ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19