ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟಿರುವುದಾಗಿ ನಿಗೂಢ ವ್ಯಕ್ತಿಯೋರ್ವ ಹೇಳಿರುವ ಹಿನ್ನೆಲೆಯಲ್ಲಿ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ(SIT)ದ ಕಚೇರಿಯನ್ನು ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆಯ ನಿರೀಕ್ಷಣಾ ಮಂದಿರದಲ್ಲಿ ತೆರೆಯಲಾಗಿದ್ದು, ಇದೀಗ ಸಹಾಯವಾಣಿಯನ್ನೂ ಆರಂಭಿಸಲಾಗಿದೆ.
ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡವನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಸಹಾಯವಾಣಿ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಹಾಯವಾಣಿ ಸಂಖ್ಯೆ 0824-2005301, 8277986369
ಇಮೇಲ್- sitdps@ksp.gov.in