ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಆ. 5 ರಿಂದ ಮುಷ್ಕರ !

ಬೆಂಗಳೂರು: ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರ ಜಂಟಿ ಕ್ರಿಯಾ ಸಮಿತಿ 38 ತಿಂಗಳಿಂದ ಬಾಕಿ ಇರುವ ವೇತನ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ನಿಗಮ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ಸಿಎಂ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ.

ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ, ಬಾಕಿ ವೇತನ ಬಿಡುಗಡೆ ಮತ್ತು ಹೊಸ ವೇತನದಲ್ಲಿ ಪರಿಷ್ಕರಣೆ ಮಾಡಬೇಕು ಎಂಬುದಾಗಿದೆ. ಇದನ್ನು ಶೀಘ್ರ ಮಾಡುವಂತೆ ನೌಕರರು ಆಗ್ರಹಿಸಿದ್ದಾರೆ. ಮಾಡದಿದ್ದರೆ ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುವುದು ಎಚ್ಚರಿಸಿದ್ದಾರೆ.

ನಾವು ವಜಾಗೊಳಿಸುವ ತಂತ್ರಗಳಿಗೆ ಹೆದರುವ ಮಾತೇ ಇಲ್ಲ ಎಂದು ಫ್ರೀಡಂ ಪಾರ್ಕ್​ನಲ್ಲಿ ಸಾಮೂಹಿಕ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.

ಒಟ್ಟಿನಲ್ಲಿ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಮೂಲಕ ಶಕ್ತಿ ತುಂಬಿದ್ದ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುತ್ತದೆಯೇ ಅಥವಾ ಹಿಂದಿನಂತೆ ಮನವೊಲಿಸಿ‌ ಮುಷ್ಕರ ವಾಪಸ್ಸು ಪಡೆಯುವಂತೆ ಮಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ .

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!