ಬೆಂಗಳೂರು: ಬನ್ನೇರುಘಟ್ಟ ಸಮೀಪ ನಿಶ್ಚಿತ್(13) ಎಂಬ ಬಾಲಕನನ್ನ ಅಪಹರಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾಗಿರುವ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಅವರ ಕಾಲಿಗೆ ಗುಂಡು ಹಾರಿಸಿ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಕಗ್ಗಲಿಪುರ ರಸ್ತೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಬಂಧಿತ ಆರೋಪಿಗಳು.
ಟ್ಯೂಷನ್‌ಗೆ ಹೋಗುತ್ತಿದ್ದ ವೇಳೆ ನಿಶ್ಚಿತ್ ಎಂಬ ಬಾಲಕನನ್ನು ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ ಬಳಿ ನಡೆದಿದೆ. ಬಾಲಕನ ತಂದೆ ಪ್ರೊಫೆಸರ್ ಆಗಿ ನಿರ್ವಹಿಸುತ್ತಿದ್ದರಿಂದ ದುಷ್ಕರ್ಮಿಗಳು ಕರೆ ಮಾಡಿ 5 ಲಕ್ಷ ಹಣಕ್ಕೆ ಬೇಡಿಕೆಯನ್ನಿಟ್ಟಿದ್ದರು. ಕಿಡ್ನಾಪರ್ಸ್ ಕಡೆಯಿಂದ ಕರೆಬರುತ್ತಿದ್ದಂತೆಯೇ ಬಾಲಕನ ಪೋಷಕರು ಎಚ್ಚೆತ್ತುಕೊಂಡು ಹುಲಿಮಾವು ಠಾಣೆಗೆ ದೂರು ನೀಡಿದ್ದರು.
ಗುರುಮೂರ್ತಿ ಮತ್ತು ಗೋಪಾಲಕೃಷ್ಣಗಳ ಕುರಿತು ಖಚಿತ ಮಾಹಿತಿ ದೊರೆತ ಮೇರೆಗೆ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಆರೋಪಿಗಳು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದು, ಹುಳಿಮಾವು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಮತ್ತು ಪಿಎಸ್ಐ ಅರವಿಂದ ಕುಮಾರ್ ಆರೋಪಿಗಳ ಮೇಳೆ ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರು ಆತ್ಮರಕ್ಷಣೆಗಾಗಿ ಒಟ್ಟಾರೆ 6 ಸುತ್ತು ಗುಂಡು ಹಾರಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಜಯನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನನ್ನು ಅಪಹರಿಸಲು ಕಾರಣ ಏನೆಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹುಳಿಮಾವು ಠಾಣೆಯಲ್ಲಿ ನಿಶ್ಚಿತ್ ಅಪಹರಣ ಪ್ರಕರಣ ದಾಖಲಾಗಿತ್ತು.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19