ಮಂಗಳೂರು: ಮಂಗಳೂರು ಹಾಗೂ ಮಡಿಕೇರಿ ಮಧ್ಯೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ 2018 ರ ವೇಳೆ ಭಾರೀ ಭೂಕುಸಿತ ಸಂಭವಿಸಿ ಸಂಚಾರವೇ ಬಂದ್ ಆಗಿತ್ತು. ಅದಾದ ಬಳಿಕ ನಾಲ್ಕೈದು ವರ್ಷ ಕಾಮಗಾರಿ ಮಾಡಿ ಮೂರು ಕೋಟಿ ರೂ. ವೆಚ್ಚದಲ್ಲಿ ಬೃಹತ್ ತಡೆಗೋಡೆ ನಿರ್ಮಿಸಲಾಗಿತ್ತು.ಆದರೆ ಈ ತಡೆಗೋಡೆ ನಿರ್ಮಾನವಾಗಿ ಒಂದು ಮಳೆಗಾಲ ಕಳೆಯುವ ಮುನ್ನವೇ ಬಿರುಕು ಬಿಟ್ಟು ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ ಎದುರಾಗಿದೆ. ಸುಮಾರು ನಾಲ್ಕು ಹಂತಗಳಲ್ಲಿ 80 ಮೀಟರ್ ಎತ್ತರದಲ್ಲಿ ಈ ತಡೆಗೋಡೆಯನ್ನು ಬಲಿಷ್ಠವಾಗಿ ಕಟ್ಟಲಾಗಿದೆ. ಆದರೆ, ನೀರು ಮತ್ತು ಮಣ್ಣಿನ ವಿಪರೀತ ಒತ್ತಡದಿಂದ ಈ ತಡೆಗೋಡೆ ಬಿರುಕು ಬಿಟ್ಟಿದೆ.
ತಡೆಗೋಡೆಯ ಕೆಳಗೆ ಹಲವು ಮನೆಗಳಿದ್ದು ಎಲ್ಲಾ ಮನೆಯೂ ಅಪಾಯಕ್ಕೆ ಸಿಲುಕಿದೆ. ಹಾಗಾಗಿ ಈ ನಿವಾಸಿಗಳ ಸ್ಥಳಾಂತರ ಮಾಡುವಂತೆ ಸೂಚನೆ ಮಾಡುವಂತೆ ಸೂಚನೆ ನೀಡಲಾಗಿದೆ. ತಡೆಗೋಡೆ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್ಗಳು ಸ್ಥಳ ಪರಿಶೀಲನೆ ಮಾಡಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ಸದ್ಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ನಿಯಂತ್ರಣ ಮಾಡಿದ್ದಾರೆ. ಇದರಿಂದ ಸಂಚಾರಕ್ಕೆ ಅಡಚಣೆಯಾಗಿದೆ. ಆದರೆ ಸದ್ಯಕ್ಕೆ ಹೆದ್ದಾರಿಗೆ ಯಾವುದೇ ಅಪಾಯ ಇಲ್ಲ ಅಂತ ಜಿಲ್ಲಾಧಿಕಾರಿ ಹೇಳಿದ್ದಾರೆ.
ಆದರೆ ಸದ್ಯಕ್ಕೆ ಹೆದ್ದಾರಿಗೆ ಯಾವುದೇ ಅಪಾಯ ಇಲ್ಲ ಅಂತ ಜಿಲ್ಲಾಧಿಕಾರಿ ಹೇಳಿದ್ದಾರೆ.