ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ

ನವದೆಹಲಿ: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ಭಾರತೀಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ ಹಾಗೂ ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನಾಂಕವೆಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ.


­­­­
ಸಂವಿಧಾನದ 66ನೇ ವಿಧಿಯಲ್ಲಿ ಉಪರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ, ರಾಜ್ಯಸಭೆಯ 233 ಚುನಾಯಿತ ಸಂಸದರು, ರಾಜ್ಯಸಭೆಯ 12 ನಾಮನಿರ್ದೇಶಿತ ಸಂಸದರು ಮತ್ತು ಲೋಕಸಭೆಯ 543 ಸಂಸದರು ತಮ್ಮ ಮತಗಳನ್ನು ಚಲಾಯಿಸಬಹುದು. ಹೀಗೆ ಒಟ್ಟು 788 ಜನರು ಮತ ಚಲಾಯಿಸಬಹುದು.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಜ್ಯಸಭೆ ಮತ್ತು ಲೋಕಸಭಾ ಸದಸ್ಯರು ಮಾತ್ರ ಮತ ಚಲಾಯಿಸುತ್ತಾರೆ. ಅದು ಕೂಡ ರಹಸ್ಯ ಮತದಾನ ಮತ್ತು ಅನುಪಾತದ ವ್ಯವಸ್ಥೆಯನ್ನು ಬಳಸಿ ಚುನಾವಣೆ ನಡೆಸಲಾಗುತ್ತದೆ. ಈ ವ್ಯವಸ್ಥೆಯಲ್ಲಿ, ಸಂಸದರು ಅಭ್ಯರ್ಥಿಗಳನ್ನು ಆದ್ಯತೆಯ ಕ್ರಮದಲ್ಲಿ ಶ್ರೇಣೀಕರಿಸುತ್ತಾರೆ.

ಅರ್ಹತೆಗಳು:
ಉಪರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಯು ಭಾರತದ ನಾಗರಿಕನಾಗಿರಬೇಕು. ಕನಿಷ್ಠ 35 ವರ್ಷ ವಯಸ್ಸಾಗಿರಬೇಕು. ರಾಜ್ಯಸಭೆಯ ಸದಸ್ಯನಾಗಿ ಆಯ್ಕೆಯಾಗಲು ಅರ್ಹತೆಯನ್ನು ಹೊಂದಿರಬೇಕು. ಕೇಂದ್ರ ಅಥವಾ ರಾಜ್ಯ ಸರ್ಕಾರಗಳು, ಸ್ಥಳೀಯ ಪ್ರಾಧಿಕಾರಗಳು ಅಥವಾ ಇತರ ಸಾರ್ವಜನಿಕ ಪ್ರಾಧಿಕಾರಗಳ ಅಡಿಯಲ್ಲಿ ಯಾವುದೇ ಹುದ್ದೆಯನ್ನು ಹೊಂದಿರಬಾರದು. 1974ರ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣಾ ನಿಯಮಗಳ ಅಡಿಯಲ್ಲಿ, ಅಭ್ಯರ್ಥಿಯ ನಾಮನಿರ್ದೇಶನವನ್ನು ಚುನಾವಣಾ ಕಾಲೇಜಿನಿಂದ ಕನಿಷ್ಠ 20 ಪ್ರಸ್ತಾವಕರು ಮತ್ತು 20 ಸಮರ್ಥಕರು ಬೆಂಬಲಿಸಬೇಕು. 15,000 ರೂ. ಭದ್ರತಾ ಠೇವಣಿಯನ್ನು ಇಡಬೇಕು.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!