ಬೆಂಗಳೂರು: ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಕೇಸ್‌ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಈ ತೀರ್ಪು ಬರ್ತಿದ್ದಂತೆ ಪ್ರಜ್ವಲ್ ರೇವಣ್ಣ ಕೋರ್ಟ್‌ನಲ್ಲೇ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ.
ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.
ಕೆ.ಆರ್ ನಗರ ಸಂತ್ರಸ್ತೆ ನೀಡಿದ ದೂರಿನ ಅನ್ವಯ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ್ದು, ನ್ಯಾಯಾಲದ ತೀರ್ಪು ಕೇಳಿ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಆಗಿದೆ. ಇನ್ನೂ ಈ ತೀರ್ಪು ಬರ್ತಿದ್ದಂತೆ ಕೋರ್ಟ್ ಹಾಲ್‌ನಲ್ಲೇ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದಾನೆ.