ಮಂಗಳೂರು: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡಲಾಗಿದ್ದಲ್ಲದೆ, ಈತ ಜಾಮೀನು ಪಡೆದ ಬಳಿಕ ನ್ಯಾಯಾಲಯದ ಅದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಹಿದೆ. ಮಡಿಕೇರಿ ಸೋಮವಾರಪೇಟೆ ನಿವಾಸಿ ಮಹಮ್ಮದ್ ಹನೀಫ್ (55) ಪ್ರಕರಣದ ಆರೋಪಿಯಾಗಿದ್ದು, ಈತನನ್ನು ಕುಶಾಲನಗರ ಎಂಬಲ್ಲಿ ಪತ್ತೆಹಚ್ಚಲಾಗಿದೆ.
ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ 35/2001 ಕಲಂ: 379 ಜೊತೆಗೆ 34 ಭಾ.ದಂ.ಸಂ ಪ್ರಕರಣ ದಾಖಲಾಗಿತ್ತು. ಈತ 2018 ರಲ್ಲಿ ಜಾಮೀನು ಪಡೆದ ನಂತರ, ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ನ್ಯಾಯಾಲಯದ ಅದೇಶ ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ: 269 ಬಿ.ಎನ್ ಎಸ್ ರಂತೆ ಪ್ರಕರಣ ದಾಖಲು ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.