ಮಹಿಳೆಯ ಸಂಗ: ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಹತ್ಯೆ!

ಹಾವೇರಿ: ಮಹಿಳೆಯ ಜೊತೆ ಸಂಗ ಬೆಳೆಸಿದ್ದ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ನಿವಾಸಿ ಮನೋಜ್ ಪ್ರಕಾಶ್ ಉಡಗಣ(28) ಹತ್ಯೆಯಾದವರು. ಇವರಿಗೆ ಕಂಠಪೂರ್ತಿ ಮದ್ಯ ಕುಡಿಸಿ, ವರದಾ ನದಿ ಬ್ರಿಡ್ಜ್ ಮೇಲಿಂದ ಆರೋಪಿಗಳು ನದಿಗೆ ದೂಡಿ ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮೃತ ಮನೋಜ್‌ ಸಹೋದರ ಶಂಭು ನೀಡಿರುವ ದೂರಿನಲ್ಲಿ ನನ್ನ ಸಹೋದರನನ್ನು ಅಪಹರಣ ಮಾಡಿ ಹತ್ಯೆ ಮಾಡಿದ್ದಾಗಿ ಕೆಲವರ ಮೇಲೆ ಆರೋಪಿಸಿದ್ದಾರೆ. ಮನೋಜ್ ವಿವಾಹಿತ ಮಹಿಳೆಗೆ ಮೆಸೇಜ್‌ ಮಾಡುತ್ತಿದ್ದು ಇದೇ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಮನೋಜ್ ಆಕೆಯನ್ನು ಪ್ರೀತಿಸುತ್ತಿದ್ದ. ಆಕೆಗೆ ಬೇರೊಬ್ಬರ ಜೊತೆ ಮದುವೆಯಾಗಿದ್ದರೂ ಸಂಗ ಬಿಟ್ಟಿರಲಿಲ್ಲ. ಆಕೆಯ ಪತಿ ಸಹಚರರ ಜೊತೆ ಸೇರಿಕೊಂಡು ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

error: Content is protected !!