ʻಹೆಣ್ಣುಮಕ್ಕಳಿಗೆ ನ್ಯಾಯ ಸಿಕ್ಕಿದೆʼ ಎಂದ ರಮ್ಯಾ!

ಹಾಸನ: ಮನೆ ಕೆಲಸದಾಕೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಿದ್ದು ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದೆ. ಈ ಬಗ್ಗೆ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟೊಂದನ್ನು ಹಂಚಿಕೊಂಡಿದ್ದು ಅದರಲ್ಲಿ “ಎಲ್ಲ ಹೆಣ್ಣುಮಕ್ಕಳಿಗೂ ನ್ಯಾಯ ಸಿಕ್ಕಿದೆ” ಎಂದು ಬರೆದಿದ್ದಾರೆ.
ರಮ್ಯಾ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ, ಪ್ರಜ್ವಲ್ ಅತ್ಯಾಚಾರ ಪ್ರಕರಣದ ಸಂಬಂಧ ಕೋರ್ಟ್‌ ನೀಡಿದ ತೀರ್ಪನ್ನು ಹಂಚಿಕೊಂಡಿದ್ದಾರೆ. ಪ್ರಜ್ವಲ್‌ ಗೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟು ನ್ಯಾಯಾಲಯದಿಂದ ತೆರಳಿದ್ದಾರೆ.

error: Content is protected !!