ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ನಡೆದ ʻಆಪರೇಷನ್ ಅಖಾಲ್ʼ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಡೆಸಿರುವ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್, ಉಗ್ರರ ಗುಪ್ತಚರ ಮಾಹಿತಿ ಪಡೆದು ʻಆಪರೇಷನ್ ಅಖಾಲ್ʼ ಹೆಸರಿನಲ್ಲಿ ಕಾರ್ಯಾಚರಣೆ ಶುರು ಮಾಡಿದ್ದು ಅರಣ್ಯ ಪ್ರದೇಶ ಸುತ್ತುವರಿದು ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿ ಓರ್ವ ಉಗ್ರನನ್ನ ಹತ್ಯೆಗೈದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಯು ಶೋಧ ಕಾರ್ಯ ನಡೆಸುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಲು ಮುಂದಾಗಿದ್ದರು. ಇದರಿಂದ ಯೋಧರು ಪ್ರತಿದಾಳಿಗೆ ಮುಂದಾದರು. ರಾತ್ರಿಯಿಡೀ ಕಾರ್ಯಾಚರಣೆ ಮುಂದುವರೆಸಿ, ಗುಂಡಿನ ಸದ್ದು ಮೊಳಗುತ್ತಿದ್ದರಿಂದ ಸ್ಥಳೀಯರಿಗೂ ಈ ಪ್ರದೇಶದತ್ತ ಸುಳಿಯದಂತೆ ಎಚ್ಚರಿಕೆ ನೀಡಲಾಗಿತ್ತು. ಈವರೆಗೆ ಓರ್ವ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ʻಆಪರೇಷನ್ ಅಖಾಲ್ʼ ಮುಂದುವರಿದಿದೆ ಎಂದು ಸೇನೆಯ ಚಿನಾರ್ ಕಾರ್ಪ್ಸ್ ತಿಳಿಸಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19