ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೀವಾವಧಿ, ರೂ. 5 ಲಕ್ಷ ದಂಡ

ಬೆಂಗಳೂರು: ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ , ಐದು ಲಕ್ಷ ರೂ ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.


ಕೆ.ಆರ್ ನಗರದಲ್ಲಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣ ಕುರಿತು ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ನಳಿನಿ ಮಾಯಾಗೌಡ ವಾದ ಪ್ರತಿವಾದ ಮಂಡಿಸಿದರು. ವಾದ ಪ್ರತಿವಾದದ ಬಳಿಕ ನ್ಯಾ. ಗಜಾನನ ಭಟ್‌ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.

ಐಪಿಸಿ ಸೆಕ್ಷನ್ 376(2)(k) ಹಾಗೂ 376 (2)(n) ಅಡಿ ತೀರ್ಪು ಪ್ರಕಟಿಸಲಾಗಿದ್ದು, ಜೀವನ ಪರ್ಯಂತ ಜೈಲು ಶಿಕ್ಷೆಯನ್ನು ಪ್ರಜ್ವಲ್ ಅನುಭವಿಸಬೇಕಿದೆ. ಅತ್ಯಾಚಾರದ 2 ಸೆಕ್ಷನ್​​​ಗಳ ಅಡಿ ಒಟ್ಟು 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರಲ್ಲಿ 7 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು ಎಂದು ಜಡ್ಜ್ ತೀರ್ಪಿನಲ್ಲಿ ತಿಳಿಸಿದ್ದಾರೆ.

ಇದರೊಂದಿಗೆ, ಮೂರು ಅತ್ಯಾಚಾರ ಪ್ರಕರಣ, 1 ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು 4 ಪ್ರಕರಣಗಳ ಪೈಕಿ ಒಂದರಲ್ಲಿ ತೀರ್ಪು ಹೊರಬಿದ್ದಂತಾಗಿದೆ. ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂಬುದು ಸಾಬೀತಾಗಿದೆ. ಪ್ರಜ್ವಲ್ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಕೋರ್ಟ್, ಶಿಕ್ಷೆ ಪ್ರಮಾಣದ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತ್ತು. ಇಂದು ಬೆಳಗ್ಗೆ ನಡೆದ ವಾದ-ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅಂತಿಮವಾಗಿ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!