ಮುಸ್ಲಿಂ ಯುವತಿಯನ್ನ ಪ್ರೀತಿಸಿದ ಹಿಂದೂ ಯುವಕನ ಬರ್ಬರ ಹತ್ಯೆ!

ಕೊಪ್ಪಳ: ಕೊಪ್ಪಳ ನಗರದ ವಾರ್ಡ್​ 3ರ ಮಸೀದಿ ಮುಂಭಾಗದಲ್ಲಿ ಭಾನುವಾರ ರಾತ್ರಿ ಮುಸ್ಲಿಂ ಧರ್ಮದ ಯುವತಿಯನ್ನ ಪ್ರೀತಿಸಿದಕ್ಕೆ ಮುಸ್ಲಿಂ ಯುವಕ ಹಿಂದೂ ಯುವಕನನ್ನು ಹತ್ಯೆಗೈದ ಘಟನೆ ನಡೆದಿದೆ.

ಸಾದಿಕ್ ಕೋಲ್ಕಾರ್​ ಎಂಬಾತ ಗವಿಸಿದ್ದಪ್ಪ ನಾಯಕ್​​ನ ಕೊಲೆ ಮಾಡಿದ್ದಾನೆ.

ಕಳೆದ ಎರಡು ವರ್ಷಗಳಿಂದ ಗವಿಸಿದ್ದಪ್ಪ, ಗೌರಿ ಅಂಗಳ ಏರಿಯಾದ ಅಪ್ರಾಪ್ತ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಜೊತೆಗೆ ಮನೆ ಬಿಟ್ಟು ಓಡಿ ಸಹ ಹೋಗಿದ್ದರು.‌ ಈ ಕುರಿತಂತೆ ನಾಲ್ಕೈದು ಬಾರಿ ಪಂಚಾಯತಿ ಸಹ ಮಾಡಲಾಗಿತ್ತು. ಆದರೂ ಸಹ ಗವಿಸಿದ್ದಪ್ಪ ಹಾಗೂ ಮುಸ್ಲಿಂ ಯುವತಿಯ ನಡುವೆ ಪ್ರೀತಿ ಮುಂದುವರೆದಿತ್ತು.

ಹಾಗಾಗಿ ಬಹದ್ದೂರ ಬಂಡಿ ರಸ್ತೆಯಿಂದ ಬರುತ್ತಿದ್ದ ಗವಿ ಸಿದ್ದಪ್ಪನನ್ನ ಸಾದಿಕ್ ಅಡ್ಡ ಹಾಕಿ ಕುತ್ತಿಗೆ ಭಾಗಕ್ಕೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದು, ಆತನೇ ನೇರವಾಗಿ ಬಂದು ತಪ್ಪನ್ನೊಪ್ಪಿಕೊಂಡು ನಗರ ಠಾಣೆಗೆ ಶರಣಾಗಿದ್ದಾನೆ.

ಘಟನಾ ಸ್ಥಳಕ್ಕೆ ಎಸ್​ಪಿ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಬಳ್ಳಾರಿ ಐಜಿಪಿ ವರ್ತಿಕಾ ಕಟಿಯಾರ್ ಸಹ ಕೊಪ್ಪಳಕ್ಕೆ ಭೇಟಿ ನೀಡಿ ಸಿಟಿ ರೌಂಡ್ಸ್ ಹಾಕಿದರು. ಸದ್ಯ ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಅವರು ಆರೋಪಿ ಸಾದಿಕ್ ಸೇರಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಆತ ಸೇರಿದಂತೆ ನಾಲ್ವರ ವಿರುದ್ಧ ಸೆಕ್ಷನ್​​ 103(1) ಬಿಎನ್​ಎಸ್​ 2023 ಕಲಂ 3(2)ವಿ, ಎಸ್​ಸಿ-ಎಸ್​ಟಿ ಕಾಯ್ದೆ 1989 ಅಡಿಯಲ್ಲಿ ದೂರು ದಾಖಲಾಗಿದೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!