ಉಡುಪಿ: ಮಣಿಪಾಲದಿಂದ ಉಡುಪಿ ಕಡೆಗೆ ವೇಗವಾಗಿ ಬಂದ ಕಾರೊಂದು ಮಣಿಪಾಲ ಪೊಲೀಸ್ ಠಾಣೆಯ ಎದುರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬೆಂಗಳೂರು ನೋಂದಣಿಯ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ಕಾರು ವೇಗವಾಗಿ ಚಲಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಅಪಘಾತದ ವೇಳೆ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿದ್ದು, ಮಣಿಪಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿ ಇನ್ನಷ್ಟೇ ದೂರು ದಾಖಲಾಗಬೇಕಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19