ನವದೆಹಲಿ: ಭಾರತದ 2,000 ಕಿಲೋಮೀಟರ್ ಗಿಂತಲೂ ಹೆಚ್ಚು ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗೆ ಸೋಮವಾರ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ್ದು, “ನಿಜವಾದ ಭಾರತೀಯ” ಅಂತಹ ಹೇಳಿಕೆಯನ್ನು ನೀಡುವುದಿಲ್ಲ ಎಂದು ಹೇಳಿದೆ. ಈ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವಾಗ, “2,000 ಕಿ.ಮೀ. ಪ್ರದೇಶವನ್ನು ಚೀನೀಯರು ವಶಪಡಿಸಿಕೊಂಡಿದ್ದಾರೆಂದು ನಿಮಗೆ ಹೇಗೆ ಗೊತ್ತಾಯಿತು?” ಎಂದು ಸುಪ್ರೀಂ ಕೋರ್ಟ್ ಕೇಳಿತು. “ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಅದನ್ನು ಹೇಳುತ್ತಿರಲಿಲ್ಲ”. ಇಂತಹ ಸೂಕ್ಷ್ಮ ವಿಚಾರವನ್ನು ಹೇಳುವಾಗ ಮಾಹಿತಿ ಇಲ್ಲದೆ ಹೇಳಬೇಡಿ ಎಂದು ಕೋ ರಾಹುಲ್ ಗಾಂಧಿಯವರನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿಯವರ ಹೇಳಿಕೆಯನ್ನು ಖಂಡಿಸಿದ್ದಾರೆ.
ಮೇ 29 ರಂದು ಅಲಹಾಬಾದ್ ಹೈಕೋರ್ಟ್ ಸಮನ್ಸ್ ಆದೇಶ ಮತ್ತು ಕ್ರಿಮಿನಲ್ ದೂರನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನಂತರ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು. ಈ ಪ್ರಕರಣವು ರಾಜಕೀಯ ಪ್ರೇರಿತವಾಗಿದ್ದು, ದುರುದ್ದೇಶಪೂರಿತ ಉದ್ದೇಶದಿಂದ ದಾಖಲಿಸಲಾಗಿದೆ ಎಂದು ಅವರು ವಾದಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್, ವಾಕ್ ಸ್ವಾತಂತ್ರ್ಯವು ಸೇನೆಯನ್ನು ಮಾನಹಾನಿ ಮಾಡುವವರೆಗೆ ಅಲ್ಲ ಎಂದು ಹೇಳಿದೆ. ದೂರುದಾರ, ಉದಯ್ ಶಂಕರ್ ಶ್ರೀವಾಸ್ತವ ಅವರು, ಡಿಸೆಂಬರ್ 2022 ರಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ಚೀನಾದೊಂದಿಗಿನ ಗಡಿ ಬಿಕ್ಕಟ್ಟಿನ ಸಂದರ್ಭದಲ್ಲಿ ಗಾಂಧಿಯವರು ಭಾರತೀಯ ಸೇನೆಯ ವಿರುದ್ಧ ಹಲವಾರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19