ನಿಮಿಷಾ ಪ್ರಿಯಾ ಗಲ್ಲು ರದ್ದಾಗಿಲ್ಲ, ಹೊಸ ದಿನಾಂಕ ನಿಗದಿಗೆ ಮನವಿ

ನವದೆಹಲಿ: ಯೆಮೆನ್ ದೇಶದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಭಾರತ ಕೇರಳದ ಮೂಲದ ನರ್ಸ್ ನಿಮಿಷಾ ಪ್ರಿಯಾರ ಗಲ್ಲು ಶಿಕ್ಷೆ ಮುಂದೂಡಲ್ಪಟ್ಟಿದೆಯೇ ಹೊರತು ರದ್ದಾಗಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಈ ಮಧ್ಯೆ ಯೆಮೆನ್ ಉದ್ಯಮಿ ತಲಾಲ್ ಅಬ್ದೋ ಮಹ್ದಿ ಸಹೋದರ ಅಬ್ದುಲ್ ಫತ್ತಾಹ್ ಮಹ್ದಿ ನಿಮಿಷಾ ಪ್ರಿಯಾರನ್ನು ಗಲ್ಲಿಗೇರಿಸಬೇಕೆಂಬ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದ್ದು, ಹೊಸ ದಿನಾಂಕ ನಿಗದಿಪಡಿಸುವಂತೆ ಅಲ್ಲಿನ ನ್ಯಾಯಾಂಗಕ್ಕೆ ಮನವಿ ಮಾಡಿದ್ದಾನೆ ಎನ್ನಲಾಗಿದೆ.

ಕೇಂದ್ರ ವಿದೇಶಾಂಗ ಸಚಿವಾಲಯದ ಪ್ರಕಾರ ನಿಮಿಷಾ ಪ್ರಿಯಾ ಪ್ರಕರಣ ಸೂಕ್ಷ್ಮ ಪ್ರಕರಣವಾಗಿದ್ದು, ಕೇಂದ್ರ ಸರ್ಕಾರ ನಿರಂತರ ಸಂಪರ್ಕದಲ್ಲಿದೆ. ಯಮೆನ್ ಗಲ್ಲು ಶಿಕ್ಷೆಯನ್ನು ಮುಂದೂಡಿದೆ, ಆದರೆ ರದ್ದುಪಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ನಾವು ಈ ವಿಷಯವನ್ನು ಗಮನಿಸುತ್ತಿದ್ದೇವೆ, ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದೇವೆ ಎಂದು ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ನಿಮಿಷಾ ಪ್ರಿಯಾ ಅವರ ಬಿಡುಗಡೆಗೆ ಮಾತುಕತೆ ನಡೆಸಲು ಐದು ಸದಸ್ಯರ ನಿಯೋಗವನ್ನು ಯೆಮೆನ್‌ಗೆ ಕಳುಹಿಸುವಂತೆ ಸೇವ್ ನಿಮಿಷಾ ಪ್ರಿಯಾ ಅಂತರರಾಷ್ಟ್ರೀಯ ಕ್ರಿಯಾ ಮಂಡಳಿಯ ವಿನಂತಿಯನ್ನು ವಿದೇಶಾಂಗ ಸಚಿವಾಲಯ (MEA) ನಿರಾಕರಿಸಿದೆ. ಗಂಭೀರ ಭದ್ರತಾ ಕಾಳಜಿಗಳು ಮತ್ತು ದೇಶದ ಪ್ರಸ್ತುತ ಆಡಳಿತದೊಂದಿಗೆ ರಾಜತಾಂತ್ರಿಕ ಸಂಬಂಧಗಳ ಕೊರತೆಯನ್ನು ವಿದೇಶಾಂಗ ಸಚಿವಾಲಯ ಉಲ್ಲೇಖಿಸಿದ್ದು, ಸೇವ್ ನಿಮಿಷಾ ಪ್ರಿಯಾ ಅಂತರರಾಷ್ಟ್ರೀಯ ಕ್ರಿಯಾ ಮಂಡಳಿಯ ಐದು ಸದಸ್ಯರ ನಿಯೋಗಕ್ಕೆ ಯೆಮೆನ್‌ಗೆ ಪ್ರಯಾಣಿಸಲು ಅನುಮತಿ ನಿರಾಕರಿಸಿದೆ.

ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಹೇಳಿದ್ದರು. ಆದರೆ ವಿದೇಶಾಂಗ ಸಚಿವಾಲಯ ಈ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ. ಹದಗೆಟ್ಟಿರುವ ಭದ್ರತಾ ಪರಿಸ್ಥಿತಿಯಿಂದಾಗಿ ಯೆಮೆನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ರಿಯಾದ್‌ಗೆ ಸ್ಥಳಾಂತರಿಸಲಾಗಿದೆ. ಸನಾದಲ್ಲಿ ಪ್ರಸ್ತುತ ಆಡಳಿತದೊಂದಿಗೆ ಯಾವುದೇ ರಾಜತಾಂತ್ರಿಕ ಸಂಬಂಧವಿಲ್ಲ ಎಂದು ಹೇಳಿದೆ.

ಸದ್ಯ ಪ್ರಕರಣದಲ್ಲಿ ಪರಿಹಾರವನ್ನು ತಲುಪುವ ಪ್ರಯತ್ನಗಳ ಭಾಗವಾಗಿ ಕೆಲವು ಸ್ನೇಹಪರ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 2017ರಲ್ಲಿ ಯೇಮನ್‌ನ ನಾಗರಿಕ ತಲಾಲ್‌ ಅಬ್ದೋ ಮಹ್ದಿ ಹತ್ಯೆ ಮಾಡಿದ ಆರೋಪದ ಮೇಲೆ ನರ್ಸ್‌ ಆಗಿದ್ದ ಕೇರಳದ ಪಾಲಕ್ಕಾಡ್‌ ಜಿಲ್ಲೆಯ ಕೊಲ್ಲಂಗೋಡ್‌ನ ನಿವಾಸಿ ನಿಮಿಷಾ ಅವರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಲಾಗಿತ್ತು. 2017 ರಲ್ಲಿ ಶಿಕ್ಷೆಗೊಳಗಾಗಿ ಸನಾದಲ್ಲಿ ಜೈಲಿನಲ್ಲಿ ಸೆರೆ ವಾಸ ಅನುಭವಿಸುತ್ತಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

 

error: Content is protected !!