ಮಂಗಳೂರು: ಕೆ.ಎಸ್.ಆರ್.ಟಿ.ಸಿ ನೌಕರರ 38 ತಿಂಗಳ ಬಾಕಿ ವೇತನ ಪಾವತಿ ಹಾಗೂ ವೇತನ ಪರಿಸ್ಕರಣೆ ಆಗ್ರಹಿಸಿ ಮಂಗಳವಾರದಂದು ಕರೆ ನೀಡಲಾಗಿರುವ ಕೆಎಸ್‌ಆರ್‌ಟಿಸಿ ನೌಕರರ ಬಂದ್‌ಗೆ ಮಂಗಳೂರು ವಿಭಾಗದಲ್ಲಿಯೂ ಸ್ಪಂದನೆ ದೊರೆಯಲಿದೆ ಎಂದು ಕಾರ್ಮಿಕ ಮುಖಂಡರು ಹೇಳಿದ್ದಾರೆ. ಆದರೆ ಹೆಚ್ಚಿನ ಪರಿಣಾಮವಾಗದು ಎಂದು ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ.
ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಮಂಗಳವಾರಕ್ಕೆ ದೂರದ ಊರುಗಳ ಪ್ರಯಾಣದ ಬುಕ್ಕಿಂಗ್ ತುಂಬಾ ಕಡಿಮೆಯಾಗಿದೆ. ಸೋಮವಾರ ಸಾಮಾನ್ಯ ದಿನಗಳಂತೆಯೇ ಪ್ರಯಾಣವಿತ್ತು. ಸೇವೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಎಲ್ಲ ಬಸ್‌ಗಳು ಸಂಚರಿಸಿವೆ ಎಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ. ಅಗತ್ಯ ಕೆಲಸಗಳಿಗಾಗಿ ಬೇರೆ ಊರಿಗೆ ಹೋಗಲು ಬಸ್ ನಿಲ್ದಾಣಕ್ಕೆ ಆಗಮಿಸಿದ ಬೆರಳ ಎಣಿಕೆಯ ಪ್ರಯಾಣಿಕರು ಬಸ್ ನಿಲ್ದಾಣ ನಿಯಂತ್ರಣ ಅಧಿಕಾರಿಗಳಿಂದ ಮಾಹಿತಿ ಪಡೆದು ಖಾಸಗಿ ಮಿನಿಬಸ್ ಮತ್ತು ಟ್ರ್ಯಾಕ್ಸ್ ,ಜೀಪ್ .ಆಟೋಗಳ ಮೂಲಕ ತೆರಳುತ್ತಿದ್ದಾರೆ.
ಮಂಗಳೂರು ವಿಭಾಗದಲ್ಲಿ ಸುಮಾರು 1,900 ಮಂದಿ ನೌಕರರಿದ್ದಾರೆ. ಅವರೆಲ್ಲರಿಗೂ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಾಗಿದೆ. ಈ ಬಗ್ಗೆ ಸಂಘಟನೆಯ ಕೇಂದ್ರ ಕಚೇರಿಯಿಂದ ಸೂಚನೆ ಬಂದಿದೆ ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಸಂಘ ಮಂಗಳೂರು ವಿಭಾಗದ ಅಧ್ಯಕ್ಷ ಪ್ರವೀಣ್ ಪ್ರತಿಕ್ರಿಯಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಎಂದಿನಂತೆ KSRTC ಸಾರಿಗೆ ಬಸ್ ಸಂಚಾರ !
ಉಡುಪಿ ಜಿಲ್ಲೆಯಲ್ಲಿ ಸಾರಿಗೆ ನೌಕರರ ಮುಷ್ಕರ ಇಲ್ಲ ಎಂದು ಉಡುಪಿ ಡಿಪೋ ಮ್ಯಾನೇಜರ್ ತಿಳಿಸಿದ್ದಾರೆ.
ಚಾಲಕರು, ನಿರ್ವಹಕರು ಸಹಿತ ಇತರ ಸಿಬಂದಿ ಸೇರಿ ಸುಮಾರು 400ಕ್ಕೂ ಅಧಿಕ ಮಂದಿ ಕರ್ತವ್ಯ ನಿರ್ವಹಿಸಿಕೊಂಡಿದ್ದು, ಯಾರೂ ಮುಷ್ಕರದಲ್ಲಿ ಭಾಗಿಯಾಗುವ ಬಗ್ಗೆ ತಿಳಿಸಿಲ್ಲ. ಮಂಗಳವಾರ ಕರ್ತವ್ಯಕ್ಕೆ ಹಾಜರಾಗುವುದಾಗಿ ಮಾಹಿತಿ ನೀಡಿದ್ದಾರೆ. ಬಸ್‌ಗಳು ಎಂದಿನಂತೆಯೇ ಸೇವೆ ನೀಡಲಿದೆ ಎಂದು ತಿಳಿಸಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19