ಕನ್ನಡದ ಯುವ ನಟ ಸಂತೋಷ್‌ ಬಾಲರಾಜ್‌ ಇನ್ನಿಲ್ಲ !

ಬೆಂಗಳೂರು: ಚಂದನವನದ ಯುವ ನಟ ಸಂತೋಷ್‌ ಬಾಲರಾಜ್‌ (34) ಜಾಂಡೀಸ್‌ ಕಾಯಿಲೆಯಿಂದ ಇಂದು ಬೆಳಗ್ಗೆ 9.45ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ʼಕರಿಯʼ ಸಿನಿಮಾ ನಿರ್ಮಾಪಕ ಆನೇಕಲ್‌ ಬಾಲರಾಜ್‌ ಅವರ ಪುತ್ರನಾಗಿದ್ದ ಸಂತೋಷ್‌ ಬಾಲರಾಜ್‌ ಅವರು ಕಳೆದ ಕೆಲ ಸಮಯದಿಂದ ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದರು. ಜಾಂಡೀಸ್‌ ಮೈಗೆಲ್ಲ ಹರಡಿದ ಕಾರಣ ಅವರ ಪರಿಸ್ಥಿತಿ ಗಂಭೀರ ಆಗಿತ್ತು. ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದರು ಎಂದು ವರದಿಯಾಗಿದೆ.

ಅವರು ಕನ್ನಡದ ʼಕರಿಯಾ-2ʼ, ʼಕೆಂಪʼ, ʼಗಣಪʼ, ʼಬರ್ಕ್ಲಿʼ, ʼಸತ್ಯʼ ಸಿನಿಮಾಗಳಲ್ಲಿ ನಾಯಕ ನಟನಾಗಿ ನಟಿಸಿ ಜನಪ್ರಿಯರಾಗಿದ್ದರು. ಚಿತ್ರರಂಗದಲ್ಲಿ ಬೆಳೆಯುವ ಹಂತದಲ್ಲಿದ್ದ ಅವರು, ಜಾಂಡೀಸ್‌ ಕಾಯಿಲೆಗೆ ತುತ್ತಾಗಿ ಸಣ್ಣ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ್ದಾರೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!