ನೇಹಾ ಹಂತಕ ಫಯಾಜ್‌ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಜಾಗೊಳಿಸಿ ಮಹಿಳಾ ನ್ಯಾಯಾಧೀಶರಾದ ಪಲ್ಲವಿ ಬಿಆರ್ ಮಹತ್ವದ ಆದೇಶ ನೀಡಿದ್ದಾರೆ.

ಕಳೆದ ಒಂದು ವರ್ಷ ನಾಲ್ಕು ತಿಂಗಳಿಂದಲೂ ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಸೋಮವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಆರೋಪಿ ಪರವಾಗಿ ಬೆಳಗಾವಿಯ ಜೆಡ್ ಎಂ ಹತ್ತರಕಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಗೆ ಸಿಐಡಿ ಪರ ವಕೀಲರಾದ ಎಸ್‌ಪಿಪಿ ಮಹೇಶ್ ವೈದ್ಯ, ನೇಹಾ ಕುಟುಂಬದ ಪರ ವಕೀಲ ರಾಘವೇಂದ್ರ ಮುತ್ತಗಿಕರ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.

ಆರೋಪಿ ಫಯಾಜ್, ಜಾಮೀನಿಗಾಗಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ನೀಡಿ ಎಂದು ಬೇಡಿಕೆ ಇಟ್ಟಿದ್ದ. ಇದೀಗ ಈ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಆರೋಪಿ ಫಯಾಜ್‌ಗೆ ಇದೇ ತಿಂಗಳ 6ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

ಎ.18ರಂದು ಫಯಾಜ್ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!