ಫೇಸ್‌ಬುಕ್‌ನಲ್ಲಿ ದ್ವೇಷ ಹರಡಿದ ಆರೋಪ: ಎಸ್‌ಡಿಪಿಐ ನಾಯಕನ ಮೇಲೆ ಕೇಸ್

ಮಂಗಳೂರು: ಫೇಸ್‌ಬುಕ್‌ ಪೇಜ್‌ನಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಉಂಟಾಗುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಆರೋಪದಲ್ಲಿ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಶ್ರಪ್ ಬಾವು ಎಂಬವರ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 14ರಂದು ಪುತ್ತೂರು ಕಸಬಾ ಗ್ರಾಮದ ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆ ನಡೆದಿದತ್ತು. ಈ ಘಟನೆಗೆ ಸಂಬಂಧಿಸಿದಂತೆ, ಆರೋಪಿ ಆಶ್ರಪ್ ಬಾವು “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ ಘಟನೆಯ ಬಗ್ಗೆ ನೈಜತೆಯನ್ನು ಪರಿಶೀಲಿಸದೇ ಸಮಾಜದಲ್ಲಿ ಧರ್ಮಧರ್ಮಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಉಂಟಾಗುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿರುವುದು ಆಗಸ್ಟ್‌ 5ರಂದು ಕಂಡುಬಂದಿತ್ತು.

ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 68/2025 ಕಲಂ: 240 ,353(2)BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಪ್ರಕಟಣೆ ತಿಳಿಸಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!