ಬ್ರಹ್ಮಾವರದಲ್ಲಿ ಪಿಗ್ಮಿ ಸಂಗ್ರಹಕನ ಹಣ ಕಳ್ಳತನ – ಆರೋಪಿ ಬಂಧನ

ಬ್ರಹ್ಮಾವರ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಬೈಕಿನ ಸೈಡ್ ಬಾಕ್ಸ್ ನಿಂದ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಅಂತರ್ ರಾಜ್ಯ ಕಳವು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಸಂತೋಷ್‌ ಹನುಮಂತ ಕಟ್ಟಿಮನಿ (39) ಬಂಧಿತ ಆರೋಪಿ. ಈತ ಕಳವು ಮಾಡಿದ 32000ರೂ. ನಗದು ಹಾಗೂ ಮೊಬೈಲ್‌ನ್ನು ವಶಪಡಿಸಕೊಳ್ಳಲಾಗಿದೆ.

ಆ.4ರಂದು ಸಂಜೆ‌ ಸೊಸೈಟಿ ಬ್ಯಾಂಕ್‌ ನ ಪಿಗ್ಮಿ ಸಂಗ್ರಹಕರು ಬ್ರಹ್ಮಾವರ ಶಿವಳ್ಳಿ ಹೋಟೆಲ್‌ ಎದುರುಗಡೆ ಪಿಗ್ಮಿ ಕಲೆಕ್ಷನ್‌ ಮಾಡಿದ ನಗದನ್ನು ಬೈಕ್ ನ ಸೈಡ್‌ ಬಾಕ್ಸ್‌ನಲ್ಲಿ ಇಟ್ಟು ಬೀಗ ಹಾಕಿ ಹೋಟೆಲ್‌ಗೆ ಹೋಗಿ ಪಿಗ್ಮಿ ಕಲೆಕ್ಷನ್‌ ಮಾಡಿ ಬಳಿಕ ವಾಪಾಸು ಬಂದು ನೋಡಿದಾಗ ಬೈಕ್ ನ ಬಾಕ್ಸ್‌ನಲ್ಲಿ ಇಟ್ಟ ನಗದು ಹಣವು ಕಾಣೆಯಾಗಿರುವುದು ಕಂಡುಬಂದಿದೆ. ಪರಿಶೀಲಿಸಿದಾಗ ಬಾಕ್ಸ್ ನ ಬೀಗ ಒಡೆದು ಬಾಕ್ಸ್‌ನಲ್ಲಿದ್ದ ನಗದು ಹಣವನ್ನು ಮತ್ತು ಪಾನ್‌ ಕಾರ್ಡ್ ಆಧಾರ್‌ ಕಾರ್ಡ್‌ ಇತರೆ ದಾಖಲೆ ಪತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!