ಹೈದರಾಬಾದ್: ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡದ ಸೋಮಂಡೆಪಲ್ಲಿ ಮಂಡಲದ ಕುಟುಂಬವೊಂದರಲ್ಲಿ 22 ವರ್ಷದ ವಧು ಹರ್ಷಿತಾ ತನ್ನ ಅದ್ಧೂರಿ ವಿವಾಹ ಸಮಾರಂಭ ನಡೆದ ಕೆಲವೇ ಗಂಟೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದಂಪತಿಗಳು ವಧುವಿನ ಮನೆಯಲ್ಲಿದ್ದರು, ಅಲ್ಲಿ “ಮೊದಲ ರಾತ್ರಿ” ಸಮಾರಂಭದ ವ್ಯವಸ್ಥೆಗಳು ನಡೆಯುತ್ತಿದ್ದವು. ನಾಗೇಂದ್ರ ಸಿಹಿತಿಂಡಿಗಳನ್ನು ತರಲು ಹೊರಗೆ ಹೋಗಿದ್ದು, ಅವರು ಹಿಂತಿರುಗಿದಾಗ ಕೋಣೆ ಲಾಕ್ ಆಗಿರುವುದನ್ನು ಕಂಡು ಪದೇ ಪದೇ ಬಾಗಿಲು ಬಡಿದಾಗ ಉತ್ತರಿಸದಿದ್ದಕ್ಕೆ ಕುಟುಂಬದ ಸದಸ್ಯರು ಮತ್ತು ಸಂಬಂಧಿಕರು ಬಾಗಿಲು ಒಡೆದು ನೋಡಿದಾಗ ಹರಿಶಿತಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಂಡುಬಂದಿದೆ.
ಅವರು ಆಕೆಯನ್ನು ಪೆನುಕೊಂಡ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಸಂದಂರ್ಭದಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾವಿನ ಸುತ್ತಲಿನ ಸಂದರ್ಭಗಳ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ದುರಂತಕ್ಕೆ ಕಾರಣವೇನೆಂಬುದನ್ನು ತಿಳಿಯಲು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19