ಉಳ್ಳಾಲ: ಸೋಮೇಶ್ವರ ನಿವಾಸಿ ಸುಕೇಶ್ ಎಂಬಾತ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈತ ಕಾರಿನಲ್ಲಿ ಠಾಣೆಯ ಆವರಣಕ್ಕೆ ಬಂದಿದ್ದ ವೇಳೆ ಇನ್ಸ್ಪೆಕ್ಟರ್ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಇದರ ಬಳಿಕ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಬಳಿ ತೆರಳಿದ್ದು, ಈ ವೇಳೆ ಆತ ಸಿಬ್ಬಂದಿ ಗೆ ಅವಾಚ್ಯ ಶಬ್ದಗಳಿಂದ ಬೈದು ಏಕವಚನದಲ್ಲಿ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಹಲ್ಲೆಗೆ ಯತ್ನಿಸಿ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದು ಪ್ರಕರಣದಲ್ಲಿ ದಾಖಲಿಸಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19