ಮಹಿಳೆಯ ಕತ್ತು ಕೊಯ್ದು ಹತ್ಯೆ ಮಾಡಿ ಹಂತಕ ಆತ್ಮಹತ್ಯೆ

ಬೆಂಗಳೂರು: ಯುವತಿಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿ ಆರೋಪಿಯು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ಈ ಘಟನೆ ನಡೆದಿದೆ.


ಕೊಲೆಯಾದ ಮಹಿಳೆಯನ್ನು ಮಂದಿರ ಮಂಡಲ್‌ (27) ಹಾಗೂ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವವನ್ನು ಸುಮನ್‌ ಮಂಡಲ್‌ (28) ಎಂದು ಗುರುತಿಸಲಾಗಿದೆ.

ಕಳೆದ 8 ವರ್ಷದ ಹಿಂದೆ ಬಿಜೋನ್ ಮಂಡಲ್ ಎಂಬಾತನನ್ನು ಮಂದಿರ ಮಂಡಲ್‌ ವಿವಾಹವಾಗಿದ್ದಳು. ದಂಪತಿಗೆ ಆರು ವರ್ಷದ ಮಗನಿದ್ದಾನೆ

ಕಳೆದ ಎರಡು ವರ್ಷಗಳಿಂದ ದಂಪತಿಯ ಮಧ್ಯೆ ಕಲಹ ನಡೆಯುತ್ತಿತ್ತು. ಹಾಗಾಗಿ ಇಬ್ಬರೂ ಬೇರ್ಪಟ್ಟಿದ್ದರು. ಮಂದಿರ ಗಂಡನ ಮನೆ ತೊರೆದು ತಿರುಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಆರೋಪಿ ಸುಮನ್ ಮಂಡಲ್ ಕೊಲೆಯಾದ ಮಹಿಳೆ ಮಂದಿರ ಮಂಡಲ್‌ ಪತಿ ಬಿಜೋನ್‌ ಮಂಡಲ್‌ನ ಸ್ನೇಹಿತನಾಗಿದ್ದ. ಆದರೆ ಸುಮನ್‌ ಹಾಗೂ ಮಂದಿರ ಇಬ್ಬರಿಗೂ ಸ್ನೇಹವಿತ್ತು ಎಂದು ಹೇಳಲಾಗಿದೆ.

ಮೊನ್ನೆ ಇಬ್ಬರ ನಡುವೆ ಗಲಾಟೆಯಾಗಿದೆ. ಸುಮನ್‌ ಚಾಕುವಿನಿಂದ ಮಂದಿರಾಳ ಕತ್ತನ್ನು ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ಸುಮನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!