ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್ ಸ್ಪರ್ಧಿ ರಜತ್ ಎಂಬವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬರ್ ಗಳ ಮೇಲೆ ಸುಮಾರು 50ರಷ್ಟು ಮಂದಿ ಏಕಾಏಕಿ ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ನಡೆದಿದೆ.
Kudla rampage ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು rampage ಕೆಮರಾಮ್ಯಾನ್ ಮೇಲೆ ದಾಳಿ ಮಾಡಲಾಗಿದೆ. ಕ್ಯಾಮೆರಾವನ್ನು ಪುಡಿ ಮಾಡಿದ್ದು ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಬ್ಬರಿಗೆ ತೀವ್ರ ಗಾಯಗಳಾಗಿವೆ ಎಂದು ಮೂಲಗಳು ಹೇಳಿವೆ.
ಸೌಜನ್ಯ ಮನೆಯ ಪಾಂಗಾಳ ಕ್ರಾಸ್ ಸಮೀಪ ದಾಳಿ ನಡೆದಿದ್ದು ಗಾಯಾಳುಗಳನ್ನು ಸದ್ಯ ಉಜಿರೆಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ.