ಪತ್ರಕರ್ತನ ಮೇಲೆ ಹಲ್ಲೆ: ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್ ಸಹಿತ ಹಲವರ ವಿರುದ್ಧ ಎಫ್‌ಐಆರ್

ಮಂಗಳೂರು: ಖಾಸಗಿ ಚಾನೆಲ್ ನ ಪತ್ರಕರ್ತ ಹರೀಶ್‌ ಅವರ ದೂರಿಗೆ ಸಂಬಂಧಿಸಿದಂತೆ ಗಿರೀಶ್‌ ಮಟ್ಟಣ್ಣನವರ್ , ಮಹೇಶ್‌ ಶೆಟ್ಟಿ ತಿಮರೋಡಿ , ಯೂಟ್ಯೂಬರ್‌ ಸಮೀರ್‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಬುಧವಾರ ಹಲ್ಲೆ ನಡೆದ ವಿಚಾರ ತಿಳಿದು ಹಲ್ಲೆಗೆ ಒಳಪಟ್ಟವರನ್ನು ಮಾತನಾಡಿಸಲು ಉಜಿರೆಯ ಬೆನಕ ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಗಿರೀಶ್‌ ಮಟ್ಟಣವರ್‌ ಬಳಿ ಬೈಟ್‌ ಕೊಡುವಂತೆ ಕೇಳಿದಾಗ ನನ್ನ ಮೇಲೆ ಬೈಯಲು ಆರಂಭಿಸಿದರು.

ಇದೇ ವೇಳೆ ಅಲ್ಲೇ ಇದ್ದ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಇತರರು ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸಮೀರ್‌ ಬೆದರಿಕೆ ಹಾಕಿದ್ದಾರೆ. ಜಯಂತ್‌ ಟಿ. ನನ್ನ ವಿಡಿಯೋ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಪತ್ರಕರ್ತ ಹರೀಶ್ ಅವರು ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರಿಗೆ ಸಂಬಂಧಿಸಿದಂತೆ ಬಿಎನ್‌ಎಸ್‌ ಸೆಕ್ಷನ್‌ 115(2), 189(2), 191(2), 351(2), 352, 190 ಅಡಿ ಎಫ್‌ಐಆರ್‌ ದಾಖಲಾಗಿದ್ದು, ಎಫ್‌ಐಆರ್‌ನಲ್ಲಿ ಗಿರೀಶ್‌ ಮಟ್ಟಣ್ಣನವರ್ (ಎ1), ಮಹೇಶ್‌ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್‌ ಸಮೀರ್‌(ಎ3), ಜಯಂತ್‌(ಎ4) ಹೆಸರನ್ನು ಉಲ್ಲೇಖಿಸಲಾಗಿದೆ.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!