ಮುಧೋಳ: ನಗರದ ಮಂಡಬಸಪ್ಪನ ಗುಡಿ ಹತ್ತಿರ ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿಯಿಂದ ಕೆಳಗೆ ಬಿದ್ದ ಬಾಲಕಿಯ ಮೇಲೆ ಹಿಂದಿನಿಂದ ಬಂದ ಟ್ರ್ಯಾಕ್ಟರ್ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆ.6 ರಂದು ರಾತ್ರಿ ಸಂಭವಿಸಿದೆ.
ಮೃತ ಬಾಲಕಿಯನ್ನು ಅಂಜಲಿ (7)ಎಂದು ಗುರುತಿಸಲಾಗಿದೆ.
ತಂದೆ ಉಮೇಶ್ ಜೊತೆ ಮುಧೋಳದಿಂದ ಬೈಕ್ ನಲ್ಲಿ ಬರಗಿ ಗ್ರಾಮಕ್ಕೆ ತೆರಳುವ ವೇಳೆ ಎದುರಿನಿಂದ ಮತ್ತೊಂದು ಬೈಕ್ ಬಂದು ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದ ಅಂಜಲಿ ಮೇಲೆ ಟ್ರ್ಯಾಕ್ಟರ್ ಹರಿದು ಘಟನೆ ನಡೆದಿದೆ.
ಘಟನೆಯಲ್ಲಿ ಬಾಲಕಿ ತಂದೆ ಉಮೇಶನಿಗೂ ಗಂಭೀರ ಗಾಯಗಳಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19