ಸುಳ್ಯ : ಸುಳ್ಯದ ಚೆಂಬು ಗ್ರಾಮದ ದಬ್ಬಡ್ಕ ಎಂಬಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ದಬ್ಬಡ್ಕ ಕೊಪ್ಪದ ಶಿವಪ್ಪ (72) ಆನೆಗೆ ದಾಳಿಗೆ ಮೃತಪಟ್ಟ ವ್ಯಕ್ತಿ.
ಆಗಸ್ಟ್ 6ರ ರಾತ್ರಿ ಸುಮಾರು 10.30 ರ ಸುಮಾರಿಗೆ ಮನೆಯ ಹತ್ತಿರದ ತೋಟದಲ್ಲಿ ನಾಯಿ ಬೊಗಳುತ್ತಿರುವುದನ್ನು ನೋಡಲು ತೋಟದ ಕಡೆಗೆ ಹೋದ ಸಂದರ್ಭದಲ್ಲಿ ಅವರ ಮೇಲೆ ಆನೆ ದಾಳಿ ನಡೆಸಿದೆ. ಮನೆಯವರು ಆ ಕೂಡಲೆ ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19