ಪಾಕ್ ಉಗ್ರರ ವಿದ್ವಂಸಕ ಕೃತ್ಯ ವಿಫಲಗೊಳಿಸಿದ ಪೊಲೀಸರು: ಸ್ಫೋಟಕ ವಶ

ಚಂಡೀಗಢ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೇಶದಲ್ಲಿ ವಿದ್ವಂಸಕ ಕೃತ್ಯ ಎಸಗಲು ಸಂಚು ಹೂಡಿದ್ದ ಪಾಕ್ ಮೂಲದ ಭಯೋತ್ಪಾದಕ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್‌ನ ಸಂಚನ್ನು ಪಂಜಾಬಿನ ದರೋಡೆಕೋರ ವಿರೋಧಿ ಕಾರ್ಯಪಡೆ ( AGTF) ವಿಫಲಗೊಳಿಸಿದ್ದಲ್ಲದೆ ಸುಧಾರಿತ ಸ್ಫೋಟಕ ಸಾಧನವನ್ನು (IED) ವಶಪಡಿಸಿಕೊಂಡಿದೆ.

ಪಾಕಿಸ್ತಾನದಿಂದ ಪ್ರಬಲ ಸ್ಫೋಟಕ ಸಾಧನ ( ಐಇಡಿ) ರವಾನೆಯ ಬಗ್ಗೆ ದೊರತ ಗುಪ್ತಚರ ಮಾಹಿತಿ ಆಧಾರದ ಮೇಲೆ AGTF ತಂಡಗಳು ಸ್ಥಳೀಯ ಪೊಲೀಸರೊಂದಿಗೆ ತರ್ನ್ ತರಣ್ ಜಿಲ್ಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದವು ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ. ನೌಶೇರಾ ಪನ್ನುವಾನ್‌ನಿಂದ IED ವಶಪಡಿಸಿಕೊಳ್ಳಲಾಗಿದೆ. ಅದನ್ನು ಉಗ್ರರ ಸಹಚರರಾದ ರಿಂಡಾ ಮತ್ತು ಲಾಂಡಾ ಅವರಿಗೆ ಕಳುಹಿಸಲು ಉದ್ದೇಶಿಸಲಾಗಿತ್ತು. ಸ್ಪೋಟಕವನ್ನು ವಶಕ್ಕೆ ಪಡೆದ ನಂತರ ಅವುಗಳನ್ನು ಯಶಸ್ವಿಯಾಗಿ ನಿಷ್ಕ್ರೀಯಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಗಡಿ ರಾಜ್ಯದಲ್ಲಿ ಅಮಾಯಕ ಜನರನ್ನು ಗುರಿಯಾಗಿಟ್ಟುಕೊಂಡು ಸಾರ್ವಜನಿಕ ನೆಮ್ಮದಿ ಹಾಳುವ ಮಾಡುವ ಉದ್ದೇಶದಿಂದ ಐಇಡಿಯನ್ನು ಪಂಜಾಬ್ ಗೆ ಕಳುಹಿಸಲಾಗುತಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು AGTF ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಮೋದ್ ಬಾನ್ ತಿಳಿಸಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 111 ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3, 4 ಮತ್ತು 5 ಅಡಿಯಲ್ಲಿ ತರನ್ ತರನ್‌ನಲ್ಲಿರುವ ಸಿರ್ಹಾಲಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಎಜಿಟಿಎಫ್ ಗುರ್ಮೀತ್ ಸಿಂಗ್ ಚೌಹಾಣ್ ಖಚಿತಪಡಿಸಿದ್ದಾರೆ.

ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ನಾಲ್ವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಎರಡು 9 ಎಂಎಂ PX5 ಪಿಸ್ತೂಲ್ ಸೇರಿದಂತೆ ಏಳು ಪಿಸ್ತೂಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇

error: Content is protected !!