ನವದೆಹಲಿ: ಶುಕ್ರವಾರ ರಾತ್ರಿ ದೆಹಲಿಯ ಕರವಾಲ್ ನಗರ ಪ್ರದೇಶದ ತನ್ನ ಮನೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು 5 ಮತ್ತು 7 ವರ್ಷದ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೊಂದಿರುವ ಆರೋಪ ಕೇಳಿಬಂದಿದೆ. ಎಂದು ಆರೋಪಿಸಲಾಗಿದೆ. ಆರೋಪಿ ಪ್ರಸ್ತುತ ಪರಾರಿಯಾಗಿದ್ದಾನೆ ಮತ್ತು ಪೊಲೀಸರು ಆತನನ್ನು ಪತ್ತೆಹಚ್ಚಲು ಹುಡುಕಾಟ ನಡೆಸಿದ್ದಾರೆ.
28 ವರ್ಷದ ಪತ್ನಿ ಜಯಶ್ರೀ ಜೊತೆಗಿನ ದೀರ್ಘಕಾಲದ ಜಗಳವೇ ಈ ಕೊಲೆಗಳಿಗೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದದ್ದಾರೆ. ಅದಾಗ್ಯೂ, ನಿಖರವಾದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಆ ವ್ಯಕ್ತಿ ತನ್ನ ಕುಟುಂಬವನ್ನು ಯಾವ ರೀತಿ ಕೊಂದಿದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ವಿಧಿವಿಜ್ಞಾನ ತಂಡಗಳು ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಮೃತದೇಹಗಳನ್ನು ರಾಷ್ಟ್ರ ರಾಜಧಾನಿಯ ಜಿಟಿಬಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಕುಟುಂಬದ ನೆರೆಹೊರೆಯವರ ಪ್ರಕಾರ, ದಂಪತಿ ಪ್ರತಿದಿನ ಜಗಳವಾಡುತ್ತಿದ್ದರು. ಇಂದು ಬೆಳಿಗ್ಗೆ 6 ಗಂಟೆಗೆ ಘಟನೆಯ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ನಾವು ಬಾಗಿಲು ತೆರೆದಾಗ, ತಾಯಿ ಮತ್ತು ಇಬ್ಬರು ಹೆಣ್ಣುಮಕ್ಕಳು ತಮ್ಮ ಹಾಸಿಗೆಯ ಮೇಲೆ ಇರುವುದನ್ನು ನಾವು ನೋಡಿದ್ದೇವೆ. ಎಂದು ನೆರೆಹೊರೆಯವರು ಹೇಳಿದರು.