ಬೆಳ್ತಂಗಡಿ: ಧರ್ಮಸ್ಥಳದಲ್ಲಿ ರಜತ್ ಇಂಟರವ್ಯೂ ಸಂದರ್ಭದಲ್ಲಿ ನಡೆದಿದ್ದ ಯೂಟ್ಯೂಬರ್ಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 6 ಮಂದಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸ್ಥಳೀಯರಾದ ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎಂದು ಹೆಸರಿಸಲಾಗಿದೆ. ಇನ್ನುಳಿದವರು ತಲೆಮರೆಸಿಕೊಂಡಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಪೊಲೀಸರು ಸುಮೋಟೋ ಪ್ರಕರಣ ಅಡಿ 27 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.