ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ 27ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 13ನೇ ಆರೋಪಿಯಾಗಿರುವ ಪುದು ಗ್ರಾಮ ನಿವಾಸಿ ರಂಜಿತ್ ಯಾನೆ ರಂಜು (35) ಎಂಬಾತನನ್ನು ಆ. 10ರಂದು ಬಂಧಿಸಿದ್ದಾರೆ.
ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಪ್ರಕರಣದಲ್ಲಿ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು 12 ಮಂದಿಯನ್ನು ಬಂಧಿಸಿದ್ದು, ಎಲ್ಲರನ್ನು ಪೊಲೀಸರು ಕೆಲವು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದರು. ಪ್ರಸ್ತುತ ಅವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.
ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19